ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ 80 ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ

0

ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ದೇವಿಕಾ ಕೆ. ಧ್ವಜಾರೋಹಣ ನೆರವೇರಿಸಿ ಶುಭ ಸಂದೇಶ ನೀಡಿದರು. ಮುಖ್ಯ ಅತಿಥಿಯಾಗಿ ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ವಸಂತ ಗೌಡ ಪಡ್ಪು ಶುಭ ಹಾರೈಸಿದರು, ಸ್ನೇಹಿತರ ಕಲಾ ಸಂಘ ದ ಕಾರ್ಯದರ್ಶಿ ಗಣೇಶ್ ಪಾಟಾಳಿ ಕುರುoಬುಡೇಲು, ಸಾಂಸ್ಕೃತಿಕ ಕಾರ್ಯದರ್ಶಿ ಮಹಾಲಿಂಗ ಪಾಟಾಳಿ ಕುರುoಬುಡೇಲು, ಬಾಲವಿಕಾಸ ಸಮಿತಿ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಮತ್ತು ಪೋಷಕರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಭಾರತಿ ಕೆ. ಸ್ವಾಗತಿಸಿ, ವಂದಿಸಿದರು. ಅಂಗನವಾಡಿ ಸಹಾಯಕಿ ಸುಜಾತಾ ಸಹಕರಿಸಿದರು.