ಬೆಳ್ಳಾರೆಯ ಉಪ ಅಂಚೆ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ

0

80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರ ದ್ವಜಾರೋಹಣ ಬೆಳ್ಳಾರೆಯ ಉಪ ಅಂಚೆ ಕಚೇರಿಯಲ್ಲಿ ನಡೆಯಿತು.

ಅಂಚೆಪಾಲಕಿ ಯಶೋಧ ರಾಷ್ಟ್ರದ್ವಜಾರೋಹಣಗೈದರು. ಬೆಳ್ಳಾರೆ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು. ಸಿಬ್ಬಂದಿ ಅನಂತಕೃಷ್ಣ ಪ್ರಭು ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಅಂಚೆ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.