ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಆ.15 ರಂದು ನಡೆಯಿತು. ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥರವರು ಧ್ವಜಾರೋಹಣ ನೆರವೇರಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು,ಉಪಾಧ್ಯಕ್ಷರು,ಸದಸ್ಯರು,ಸಹಕಾರಿ ಸಂಘದ ನಿರ್ದೇಶಕರು,ಸದಸ್ಯರು,ಪಂಚಾಯತ್ ಸಿಬ್ಬಂದಿ ವರ್ಗದವರು ಹಾಗೂ ನಾಗರಿಕರು ಉಪಸ್ಥಿತರಿದ್ದರು
.