ನಾರ್ಣಕಜೆ : ಸ್ವಾತಂತ್ರ್ಯ ದಿನಾಚರಣೆ ಮತ್ತು ಬ್ಯಾಗ್ ವಿತರಣೆ

0

ನೆಲ್ಲೂರು ಕೆಮ್ರಾಜೆ ಗ್ರಾಮದ ನಾರ್ಣಕಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಉಚಿತ ಬ್ಯಾಗ್ ವಿತರಣೆ ನಡೆಯಿತು.

ಎಸ್ ಡಿ ಎಂ ಸಿ ಅಧ್ಯಕ್ಷೆ ಶ್ರೀಮತಿ ವಿಶಾಲಾಕ್ಷ್ಮಿ ಧ್ವಜಾರೋಹಣ ನೆರವೇರಿಸಿ, ಬಳಿಕ ನಡೆದ ಸಭಾ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ವಿಷ್ಣು ಭಟ್ ಮೂಲೆತೋಟ, ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಪುತ್ತೂರು ಇದರ ಉಪಾಧ್ಯಕ್ಷ ಉಮೇಶ್ ಪ್ರಭು, ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಯಜ್ಞೆಶ್ವರ, ಸರಸ್ವತಿ ಸಹಕಾರಿ ಸಂಘದ ಸಿಬ್ಬಂದಿ ಶ್ರೀಕೃಷ್ಣಯ್ಯ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶ್ರೀಮತಿ ಸುಮಿತ್ರಾ, ಶಾಲಾ ಮುಖ್ಯ್ಯೊಪಾಧ್ಯಾಯಿನಿ ಶ್ರೀಮತಿ ಮನೋರಮ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದರ ವತಿಯಿಂದ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ರಜತ ಮಹೋತ್ಸವದ ಪ್ರಯುಕ್ತ ನಾರ್ಣಕಜೆ ಶಾಲೆಗೆ ಕೊಡಮಾಡಿದ ಉಚಿತ ಬ್ಯಾಗ್ ನ್ನು ವಿತರಿಸಲಾಯಿತು.

ಗೌರವ ಶಿಕ್ಷಕಿ ದುರ್ಗಾಶ್ರೀ ಸ್ವಾಗತಿಸಿ, ಅತಿಥಿ ಶಿಕ್ಷಕಿ ಅನುಶ್ರೀ ವಂದಿಸಿದರು. ಅತಿಥಿ ಶಿಕ್ಷಕಿ ಶ್ರೀಮತಿ ಸುಮಿತ್ರಾ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.