













ಪೆರುವಾಜೆ ಗ್ರಾಮ ಪಂಚಾಯತ್ ಮತ್ತು ನೀರ್ಕಜೆ ಅಮೃತ ಸರೋವರದ ಬಳಿ ಸ್ವಾತಂತ್ರ್ಯೋತ್ಸವವನ್ನು ಆ.15 ರಂದು ಆಚರಿಸಲಾಯಿತು.
ಅಮೃತ ಸರೋವರದ ಬಳಿ ಸುಬ್ರಾಯ ಭಟ್ ನೀರ್ಕಜೆ ದ್ವಜಾರೋಹಣ ನೆರವೇರಿಸಿದರು. ಗ್ರಾಮ ಪಂಚಾಯತಿ ನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಜಯಮಾಲಾ ದ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳು , ಸದಸ್ಯರು, ಎಸ್ ಡಿ ಎಂ ಸಿ ಅಧ್ಯಕ್ಷರು ಶಾಲಾ ವಿದ್ಯಾರ್ಥಿಗಳು, ನಿವೃತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ, ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಹಾಗೂ ನಾಗರಿಕರು ಉಪಸ್ಥಿತರಿದ್ದರು.







