ಅಡ್ಯಡ್ಕ-ತೊಡಿಕಾನದಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

0

ಅಡ್ಯಡ್ಕ-ತೊಡಿಕಾನದ ಗಾಂಧಿ ಮೈದಾನದಲ್ಲಿ ಶ್ರೀ ದೇವಿ ಫ್ರೆಂಡ್ಸ್ ಕ್ಲಬ್ (ರಿ.) ಹಾಗೂ ಶ್ರೀ ದೇವಿ ಮಹಿಳಾ ಸಂಘದ ಜಂಟಿ ಆಶ್ರಯದಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.

ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ, ಸಂಪಾಜೆ ವಲಯದ ಮೇಲ್ವಿಚಾರಕರಾದ ಹರೀಶ್ ಆಚಾರ್ಯ ಅವರು ಧ್ವಜಾರೋಹಣ ನೆರವೇರಿಸಿದರು. ಶ್ರೀ ದೇವಿ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ಮಣಿರಾಜ ಆರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಅರಂತೋಡು ಮಾಜಿ ಗ್ರಾಮ ಪಂಚಾಯತ್ ಸದಸ್ಯ ನಾಗೇಶ್ ಶೆಟ್ಟಿ ಡಿ.ಬಿ., ಕರ್ನಾಟಕ ತಮಿಳ್ ಯೂತ್ ವೆಲ್ಫೇರ್ ಚಾರಿಟೇಬಲ್ ಟ್ರಸ್ಟ್, ಸುಳ್ಯದ ರಕ್ಷಿತ್ ದೊಡ್ಡಡ್ಕ, ಶ್ರೀ ದೇವಿ ಮಹಿಳಾ ಸಂಘದ ಅಧ್ಯಕ್ಷೆ ರೂಪರಾಣಿ ಕುಮಾರವೇಲು, ಶ್ರೀ ದೇವಿ ಫ್ರೆಂಡ್ಸ್ ಕ್ಲಬ್‌ನ ಮಾಜಿ ಅಧ್ಯಕ್ಷ ಸತ್ಯನಾಥ್ ಸಿ. ಹಾಗೂ ಮಾಜಿ ಪ್ರಧಾನ ಕಾರ್ಯದರ್ಶಿ ಶಿವರಾಮ ಅಡ್ಯಡ್ಕ ಉಪಸ್ಥಿತರಿದ್ದರು.

ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.