ಕಲ್ಲುಗುಂಡಿ ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಕಲ್ಲುಗುಂಡಿ ಸವೇರಪುರ ಆಂಗ್ಲ ಮಾಧ್ಯಮಶಾಲೆಯಲ್ಲಿ 80 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ನಿವೃತ್ತ ಸೈನಿಕರಾದ ಸುಬೇದಾರ್ ಅಬ್ರಹಾಂ ಧ್ವಜಾರೋಹಣವನ್ನು ನಿರ್ವಹಿಸಿ, ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಶಾಲಾ ಜೊತೆ ಕಾರ್ಯದರ್ಶಿ ರೆ , ಫಾ. ಜಯಪ್ರಕಾಶ್ ಡಿಸೋಜ, ಶಾಲಾ ಶಿಕ್ಷಕ ರಕ್ಷಕ ಕಾರ್ಯಕಾರಿ ಸಮಿತಿಯ ಉಪಾಧ್ಯಕ್ಷ ಲೂಕಾಸ್ ಟಿ. ಐ, ಚರ್ಚ್ ಪಾಲನ ಸಮಿತಿಯ ಉಪಾಧ್ಯಕ್ಷ ಲನ್ಸಿ ಡಿಸೋಜ , ಶಾಲಾ ಮುಖ್ಯೋಪಾಧ್ಯಾಯರು ಸಿಸ್ಟರ್ ಅನಿತಾ ಫರ್ನಾಂಡಿಸ್, ಉಪಮುಖ್ಯೋಪಾಧ್ಯಾಯರು ವನಿತಾ , ಶಾಲಾ ಶಿಕ್ಷಕ ವೃಂದ, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಬಳಿಕ ಸಿಹಿ ತಿಂಡಿ ವಿತರಿಸಲಾಯಿತು.