ಚೆಂಬು : ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಚೆಂಬು ಗ್ರಾಮದ ಸರ್ಕಾರಿ ಪ್ರೌಡ ಶಾಲೆಯಲ್ಲಿ ೮೦ ನೇ ಸ್ವಾತಂತ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಬೆಳಿಗ್ಗೆ ೯.೩೦ಕ್ಕೆ ಸರಿಯಾಗಿ ನಿವೃತ್ತ ಯೋಧರು ಮತ್ತು ಶಾಲಾ ವಿದ್ಯಾರ್ಥಿಗಳ ವಾಲಿಬಾಲ್ ತರಬೇತುದಾರರಾದ ಸೈನುದ್ದಿನ್ ರವರು ದ್ವಜ ಆರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಬಗ್ಗೆ ಮನಮುಟ್ಟುವಂತೆ ಮಾತನಾಡಿದರು.

ನಂತರ ನಡೆದ ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಚಿದಾನಂದ ಎನ್. ಹೆಚ್ ವಹಿಸಿದ್ದರು.ಸಭೆಯಲ್ಲಿ ಶಾಲಾ ವಿದ್ಯಾರ್ಥಿ ಬಳಗದಿಂದ ದಿನದ ಆಚರಣೆಯ ಬಗ್ಗೆ ಭಾಷಣ,ದೇಶಭಕ್ತಿಗೀತೆ ಮುಂತಾದ ವಿವಿಧ ಬಗೆಯ ಅರ್ಥಪೂರ್ಣ ಕಾರ್ಯಕ್ರಮಗಳು ಜರಗಿತು. ಶಾಲಾ ಮುಖ್ಯ ಶಿಕ್ಷಕರಾದ Dr.ಯೋಗೀಶ್ ಮಾಸ್ಟರ್ ರವರು ದಿನದ ಮಹತ್ವವನ್ನು ತಿಳಿಸಿದರು ಮಾತ್ರವಲ್ಲದೆ ತಾವು ಅಧ್ಯಯನ ಮಾಡಿದ ವಿದ್ಯಾಸಂಸ್ಥೆಯನ್ನು ಮುಂದಿನ ಹಲವಾರು ತಲೆಮಾರುಗಳಿಗೆ ವಿಧ್ಯಾಭ್ಯಾಸಕ್ಕೆ ದೊರಕಿಸಿಕೊಡುವಲ್ಲಿ ವಿದ್ಯಾರ್ಥಿಗಳು ಮಾಡಬೇಕಾದ ಕರ್ತವ್ಯವನ್ನು ವಿಧ್ಯಾರ್ಥಿಗಳಿಗೆ ಒತ್ತಿ ಹೇಳಿದರು.

ವೇದಿಕೆಯಲ್ಲಿ ಎಸ್.ಡಿ.ಎಂ.ಸಿ.ಉಪಾಧ್ಯಕ್ಷರಾದ ಗೀತಾಲಕ್ಷ್ಮಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಲಕ್ಷ್ಮೀಶ ಊರು ಪಂಜ, ಹಿರಿಯ ಸದಸ್ಯರಾದ ಚಂದ್ರಶೇಖರ ಹೊಸೂರು, ಎಸ್.ಡಿ.ಎಂ.ಸಿ.ಸದಸ್ಯರು ಉಪಸ್ಥಿತರಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಸುಜಾತಾ ಶೆಡ್ತಿ ದ್ವಜಾರೋಹಣ ಕರ್ತವ್ಯ ನಿರ್ವಹಿಸಲು ಸಹಕರಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದ, ಸಿಬ್ಬಂದಿ ವರ್ಗ, ಪೋಷಕರು, ವಿದ್ಯಾರ್ಥಿಗಳು ಹಾಜರಿದ್ದರು. ವಿಧ್ಯಾರ್ಥಿನಿ ಭೂಮಿಕಾ ಸ್ವಾಗತಿಸಿ,ಸಾನ್ವಿ ವಂದನಾರ್ಪಣೆ ಸಲ್ಲಿಸಿದರು. ವಿಧ್ಯಾರ್ಥಿನಿ ಶ್ರದ್ಧಾ ಕಾರ್ಯಕ್ರಮ ನಿರೂಪಿಸಿದರು.