ಕೊಲ್ಲಮೊಗ್ರು ಕೆ ವಿ ಜಿ ಅನುದಾನಿತ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

0

ಕೊಲ್ಲಮೊಗ್ರು ಕೆ ವಿ ಜಿ ಅನುದಾನಿತ ಪ್ರೌಢಶಾಲೆಯಲ್ಲಿ ಆ.15 ರಂದು ಸ್ವಾತಂತ್ರ್ಯೋತ್ಸವ ನಡೆಸಲಾಯಿತು. ಹರಿಹರ ಪಲ್ಲತ್ತಡ್ಕ ಪ್ರಾ.ಕೃ ಪ.ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಂತರಾಮ ಮಣಿಯಾನ ಧ್ವಜಾರೋಹಣ ಮಾಡಿದರು.

ಕಾರ್ಯಕ್ರಮದಲ್ಲಿ ಮೆರೆವಣಿಗೆ,ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸ್ಪರ್ಧೆಗಳ ಬಹುಮಾನ, ದತ್ತಿನಿಧಿ ವಿತರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕಮಲಾಕ್ಷ ಗೌಡ ಮುಳುಬಾಗಿಲು, ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶ್ರೀಮತಿ ತೇಜಾವತಿ ಅಂಬೆಕಲ್ಲು, ಹವಿದ್ಯಾರ್ಥಿಗಳ ಪೋಷಕರು, ತಾಯಂದಿರ ಸಮಿತಿಯ ಸದಸ್ಯೆಯರು, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ ಸಿಬ್ಬಂದಿ ವರ್ಗ ಅಕ್ಷರ ದಾಸೋಹ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.