ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. , ಬೆಂಗಳೂರು ಇದರ ಆಡಳಿತ ಮಂಡಳಿ ಚುನಾವಣೆ














ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. , ಬೆಂಗಳೂರು ಇದರ ಆಡಳಿತ ಮಂಡಳಿ ಚುನಾವಣೆಯಲ್ಲಿ ಮೈಸೂರು ವಿಭಾಗದ ನಿರ್ದೇಶಕರಾಗಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ರವರು 18 ಮತಗಳಲ್ಲಿ ಸಂಪೂರ್ಣ 18 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಳೆದ 62 ವರ್ಷಗಳ ಇತಿಹಾಸದಲ್ಲಿ ಪ್ರತಿಷ್ಠಿತ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. , ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಮೊಟ್ಟ ಮೊದಲ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ನಿರ್ದೇಶಕರಾಗಿ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾಗಿ, ಇರ್ದೆ ಬೆಟ್ಟಂಪಾಡಿ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಇವರು ಇದೀಗ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. , ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾಗುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಹೊಸ ಇತಿಹಾಸ ವನ್ನು ಸೃಷ್ಟಿಸಿದ್ದಾರೆ.







