ಕಬಡ್ಡಿಯಲ್ಲಿ ಜ್ಞಾನದೀಪ ವಿದ್ಯಾಸಂಸ್ಥೆ, ಎಲಿಮಲೆಯ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

0

ವಿದ್ಯಾಭಾರತಿ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶ್ರೀರಾಮ ವಿದ್ಯಾಕೇಂದ್ರ, ಕಲ್ಲಡ್ಕ ಇದರ ಆಶ್ರಯದಲ್ಲಿ ಆ. 22ರಂದು ಕಲ್ಲಡ್ಕದಲ್ಲಿ ನಡೆದ ವಿದ್ಯಾಭಾರತಿಯ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬಾಲವರ್ಗ ಬಾಲಕಿಯರ ವಿಭಾಗದಲ್ಲಿ ಜ್ಞಾನದೀಪ ಎಲಿಮಲೆ ಶಾಲೆಯ ವಿದ್ಯಾರ್ಥಿನಿಯರಾದ ಕುಮಾರಿ ರಶ್ಮಿತಾ ಬಲ್ಕಾಡಿ, ಜ್ಞಾನ್ವಿ ಕಡಪಳ 8ನೇ ತರಗತಿ ಹಾಗೂ ಪಂಚಮಿ ದೋಣಿಪಳ್ಳ 7ನೇ ತರಗತಿ ಈ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ದಿನಾಂಕ 29/08/ 2026 ಹಾಗೂ 30/08/2026 ರಂದು ಚಿಕ್ಕಬಳ್ಳಾಪುರದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ದಕ್ಷಿಣಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.