ನಾಗಪಟ್ಟಣ ಸದಾಶಿವ ದೇವಸ್ಥಾನದಲ್ಲಿ ಶ್ರಾವಣ ಶನಿವಾರ – ಬಲಿವಾಡು ಕೂಟ

0

ನಾಗಪಟ್ಟಣ ಶ್ರೀ ಸದಾಶಿವ ದೇವಸ್ಥಾನದಲ್ಲಿ ಶ್ರಾವಣ ಶನಿವಾರದಂದು ಬಲಿವಾಡು ಕೂಟವು ಆ.29 ರಂದು ನಡೆಯಿತು.

ದೇವಸ್ಥಾನದ ಅರ್ಚಕರ ನೇತೃತ್ವದಲ್ಲಿ ಬೆಳಗ್ಗೆ ಪೂಜೆಯು ನೆರವೇರಿದ ಬಳಿಕ ಮಧ್ಯಾಹ್ನ ಮಹಾಪೂಜೆಯಾಗಿ ಪ್ರಸಾದ ವಿತರಣೆ ಹಾಗೂ ಬಲಿವಾಡು ಕೂಟ ನಡೆಯಿತು.

ಈ ಸಂದರ್ಭದಲ್ಲಿ
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಗೌಡ ಕಡೆಂಗ ಮತ್ತು ಸಮಿತಿಯ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿದರು. ‌