ಅರಂತೋಡು: ಬಾಳೆ ನಾರಿನ ಚೀಲ ತಯಾರಿಕೆ ಮತ್ತು ಮೌಲ್ಯವರ್ಧಿತ ಉತ್ಪನ್ನಗಳ ಕೌಶಲ್ಯ ತರಬೇತಿ ಕಾರ್ಯಾಗಾರ

0

ಸುಳ್ಯ ತಾಲೂಕು ಪಂಚಾಯತ್ ಮತ್ತು ಅರಂತೋಡು ಗ್ರಾಮ ಪಂಚಾಯತ್ ವತಿಯಿಂದ ಬಾಳೆ ನಾರಿನ ಚೀಲ ತಯಾರಿಕೆ ಮತ್ತು ಮೌಲ್ಯವರ್ಧಿತ ಉತ್ಪನ್ನಗಳ ಕುರಿತು ಕೌಶಲ್ಯ ತರಬೇತಿ ಕಾರ್ಯಕ್ರಮವು ಸೆ.15 ರಂದು ನಡೆಯಿತು.

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಯೋಜನೆಯ ಡಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಆಲೆಟ್ಟಿ ಲಕ್ಷ್ಮಿ ಸಂಜೀವಿನಿ ಒಕ್ಕೂಟ ಅಲೆಟ್ಟಿ,ಅರಂತೋಡು ದುರ್ಗಾಮಾತಾ ಸಂಜೀವಿನಿ ಒಕ್ಕೂಟದ ಆಶ್ರಯದಲ್ಲಿ ಅರಂತೋಡಿನ ಜೀವನೋಪಾಯ ಸೇವಾ ಕೇಂದ್ರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸುನಿಧಿ ಫೌಂಡೇಶನ್ ಟ್ರಸ್ಟ್ ತರಬೇತಿ ಕಾರ್ಯಕ್ರಮವನ್ನು ಮಣಿಪಾಲ್ ಪೇಮೆಂಟ್ ಮತ್ತು ಐಡೆಂಟಿಟಿ ಸೊಲ್ಯೂಷನ್ಸ್ ಲಿಮಿಟೆಡ್ ಮಣಿಪಾಲ್ ಮತ್ತು ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ್ ಇದರ ಸಹಯೋಗದಲ್ಲಿ ನಡೆಸಲಾಯಿತು.

ಬಾಳೆ ನಾರು ತೆಗೆಯುವಿಕೆ ಮತ್ತು ಬಾಳೆ ನಾರಿನಿಂದ ಚೀಲಗಳು ಮತ್ತು ಇತರ ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸುವುದರ ಮೇಲೆ ಕೇಂದ್ರೀಕೃತವಾಗಿದ್ದು ಇದರಿಂದಸಣ್ಣ ಪ್ರಮಾಣದ ಆದಾಯಗಳಿಸಲುಪೂರಕವಾಗಲಿದೆ.
ಸ್ವ-ಉದ್ಯೋಗ, ಮಹಿಳಾ ಸಬಲೀಕರಣ ಮತ್ತು ಸುಸ್ಥಿರಜೀವನೋಪಾಯವನ್ನು ಉತ್ತೇಜಿಸುವ ಗುರಿ ಹೊಂದಿದೆ.
ಈ ಕಾರ್ಯಕ್ರಮದಲ್ಲಿ ಭಾರತೀಯ ವಿಕಾಸ ಟ್ರಸ್ಟ್‌ನ ಕಾರ್ಯಕ್ರಮ ವ್ಯವಸ್ಥಾಪಕರಾದ ಜೀವನ್, ತಮಿಳುನಾಡಿನ ಕಾವಿನ್ ಇಕೋ ಗ್ರೀನ್ ಪ್ರಾಡಕ್ಟ್‌ನ ತರಬೇತುದಾರರಾದ ತಿರುಮುರುಗನ್, ಸುಳ್ಯ ತಾಲ್ಲೂಕು ಪಂಚಾಯತ್ ಎನ್ಆರ್ ಎಲ್ಎಮ್ ವ್ಯವಸ್ಥಾಪಕಿ ಶ್ರೀಮತಿ ಶ್ವೇತಾ ವಿ. ಜಿ., ಲಕ್ಷ್ಮಿ ಸಂಜೀವಿನಿ ಒಕ್ಕೂಟ ಅಲೆಟ್ಟಿ ಅಧ್ಯಕ್ಷೆ ಶ್ರೀಮತಿ ಸುಷ್ಮಾ, ದುರ್ಗಾಮಾತಾ ಸಂಜೀವಿನಿ ಅರಂತೋಡು ಕಾರ್ಯದರ್ಶಿ ಶ್ರೀಮತಿ ವೀಣಾ, ಸುಳ್ಯ ತಾಲೂಕು ಅಭಿಯಾನ ನಿರ್ವಹಣಾ ಘಟಕದ ಸಿಬ್ಬಂದಿಗಳು ಮತ್ತು ಅಲೆಟ್ಟಿ, ಅರಂತೋಡು ,ಸಂಪಾಜೆ ಮತ್ತು ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್‌ ಒಕ್ಕೂಟದ ಸಿಬ್ಬಂದಿಗಳು ಮತ್ತು ಶಿಬಿರಾರ್ಥಿಗಳು ಭಾಗವಹಿಸಿದ್ದರು.