ರಾಜ್ಯದ ಜನತಾದಳ (ಜಾತ್ಯಾತೀತ) ಪಕ್ಷದ ದ.ಕ. ಜಿಲ್ಲಾ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾಗಿ ಅಭಿಜಿತ್ ಎ.ಹೆಚ್.ಆಯ್ಕೆಯಾಗಿದ್ದಾರೆ.














ಕರ್ನಾಟಕ ಪ್ರದೇಶ ಜನತಾದಳದ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿರವರ ಆದೇಶದ ಮೇರೆಗೆ ನೇಮಕ ಮಾಡಲಾಗಿದ್ದು,
ಇದರಲ್ಲಿ ದ.ಕ. ಜಿಲ್ಲೆಯ ವಿವಿಧ ವಿಧಾನ ಸಭಾ ಕ್ಷೇತ್ರದ ಎಲ್ಲಾ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಮಹಿಳಾ ಘಟಕ, ಯುವ ವಿದ್ಯಾರ್ಥಿ ಘಟಕ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರ ಘಟಕಗಳನ್ನು ರಚಿಸುವುದಲ್ಲದೆ, ದ.ಕ.ಜಿಲ್ಲಾ ವಿದ್ಯಾರ್ಥಿ ಜನತಾದಳ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಿ ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದಾರೆ.
ತಾಲೂಕು ಅಧ್ಯಕ್ಷ ಸುಕುಮಾರ ಕೋಡ್ತುಗುಳಿ ಮತ್ತು ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡರ ಶಿಫಾರಸ್ಸಿನ ಮೇರೆಗೆ
ದಕ್ಷಿಣ ಕನ್ನಡ ಜಿಲ್ಲಾ ವಿದ್ಯಾರ್ಥಿ ಜನತಾದಳದ ಅಧ್ಯಕ್ಷ ನಿಹಾಲ್ ಎಸ್.ಕೋಡ್ತುಗುಳಿ ಅವರು ಅಭಿಜಿತ್ ರವರನ್ನು ಉಪಾಧ್ಯಕ್ಷರಾಗಿ ನೇಮಿಸಿದ್ದಾರೆ .
ಇವರು ಬಾಡಿ ಬಿಲ್ಡಿಂಗ್ ಸ್ಮರ್ಧೆಯಲ್ಲಿಯೂ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದಾರೆ.







