ಐವರ್ನಾಡಿನಲ್ಲಿ ರಾಷ್ಟ್ರೀಯ ಪೌಷ್ಟಿಕ‌ ಸಪ್ತಾಹ ಪೋಷಣ್ ಮಾಹೆ ಕಾರ್ಯಕ್ರಮ

0

ಮಕ್ಕಳ‌ ದೈಹಿಕ ಬೆಳವಣಿಗೆಗೆ ಪೋಷಕಾಂಶಗಳು ಪೂರಕ – ಎಸ್.ಎನ್.ಮನ್ಮಥ

ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,
ಶಿಶು ಅಭಿವೃದ್ಧಿ ಸೇವಾ ಯೋಜನೆ ಸುಳ್ಯ, ಪಂಚಮುಖಿ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಐವರ್ನಾಡು, ಗ್ರಾಮ ಪಂಚಾಯತ್ ಐವರ್ನಾಡು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ರಿ. ಐವರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಅಂಗನವಾಡಿ ಕೇಂದ್ರಗಳು ಐವರ್ನಾಡು ಗ್ರಾಮ ಇವರ ಸಂಯುಕ್ತ ಆಶ್ರಯದಲ್ಲಿ
ರಾಷ್ಟ್ರೀಯ ಪೌಷ್ಟಿಕ ಸಪ್ತಾಹ ಪೋಷಣ್ ಮಾಹೆ ಕಾರ್ಯಕ್ರಮವು ಸೆ.19 ರಂದು ಐವರ್ನಾಡು ಗ್ರಾಮ ವಿಕಾಸ ಸಭಾಭವನದಲ್ಲಿ ನಡೆಯಿತು.
ಐವರ್ನಾಡು ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥರವರು ಕಾರ್ಯಕ್ರಮವನ್ನು ದೀಪಬೆಳಗಿಸಿ ಉದ್ಘಾಟಿಸಿ ಮಾತನಾಡಿ ತಾಲೂಕಿನಾದ್ಯಂತ ಪೋಷಣ್ ಅಭಿಯಾನ ಕಾರ್ಯಕ್ರಮ ನಡೆಯುತ್ತಿದೆ.ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಪೌಷ್ಟಿಕಾಂಶ ಇರುವ ಆಹಾರ ಸೇವನೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ.
ಪೌಷ್ಟಿಕಾಂಶಯುಕ್ತ ಆಹಾರ ಸೇವನೆಯಿಂದ ಮಕ್ಕಳ ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ಮಕ್ಕಳ ದೈಹಿಕ ಸಾಮರ್ಥ್ಯ ಕೂಡ ಹೆಚ್ಚುತ್ತದೆ ಎಂದು ಹೇಳಿದರು.
ಪಂಚಮುಖಿ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಅಧ್ಯಕ್ಷೆ ಶ್ರೀಮತಿ ಸುಂದರಿ ಪಿ.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು ಶುಭಹಾರೈಸಿ ಮಾತನಾಡಿದರು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ‌ ಪ್ರಮೀಳಾ ಟಿ.ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.
ಶಿಶು ಅಭಿವೃದ್ಧಿ ಯೋಜನಾ ಇಲಾಖೆಯ ಮೇಲ್ವಿಚಾರಕಿ ಶ್ರೀಮತಿ ಉಷಾ ಪ್ರಸಾದ್ ರೈ ಪ್ರಾಸ್ತಾವಿಕ ಮಾತನಾಡಿದರು.
ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಮತ್ತು ಮಕ್ಕಳಿಗೆ ಅನ್ನಪ್ರಶನ ಕಾರ್ಯಕ್ರಮವನ್ನು ನಡೆಸಲಾಯಿತು. ಪೌಷ್ಠಿಕ ಆಹಾರ ಪ್ರಾತ್ಯಕ್ಷಿಕೆಯಲ್ಲಿ ಪಾಲ್ಗೊಂಡವರಿಗೆ ಬಹುಮಾನ ವಿತರಿಸಲಾಯಿತು.
ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ತಿರುಮಲೇಶ್ವರ್ ಉಪಸ್ಥಿತರಿದ್ದರು.
ಜ್ಯೋತಿ ಪ್ರಾರ್ಥಿಸಿ,‌ನಿಡುಬೆ ಅಂಗನವಾಡಿ ಕಾರ್ಯಕರ್ತೆ ರೋಹಿತಾಕ್ಷಿ ಸ್ವಾಗತಿಸಿ, ಶ್ರೀಮತಿ ರಾಜೇಶ್ವರಿ ಕಾರ್ಯಕ್ರಮ‌ ನಿರೂಪಿಸಿದರು.