ಬೆಳ್ಳಾರೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ, ಗುರುಪೂಜೆ, ಪ್ರತಿಭಾ ಪುರಸ್ಕಾರ, ಸನ್ಮಾನ

0

ಸಾಮಾಜಿಕ ಜಾಗೃತಿ ಮೂಡಿಸಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು – ದಯಾನಂದ ಕರ್ಕೇರ ಉಗ್ಗೇಲುಬೆಟ್ಟು

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಸುಳ್ಯ,ಯುವವಾಹಿನಿ ಸುಳ್ಯ ಘಟಕ ವತಿಯಿಂದ 172ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ, ಗುರುಪೂಜೆ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮವು ಸೆ.20 ರಂದು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘದ ಅಧ್ಯಕ್ಷ ಎ.ಕೃಷ್ಣಕುಮಾರ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ರಾಜ್ಯ ಶಾಸ್ತ್ರ ಉಪನ್ಯಾಸಕ ದಯಾನಂದ ಕರ್ಕೇರ ಉಗ್ಗೇಲುಬೆಟ್ಟು ರವರು ಗುರು ಸಂದೇಶ ನೀಡಿ “ಬ್ರಹ್ಮ ಶ್ರೀ ನಾರಾಯಣ ಗುರುಗಳು ಮಹತ್ಕಾರ್ಯ ಮಾಡಿದವರು, ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡುತ್ತಾ ಎಲ್ಲರಿಗೂ ಅವಕಾಶ ನೀಡುವಂತೆ ಮಾಡಿದ್ದಾರೆ.ಇವರು ಸಾಮಾಜಿಕ ಜಾಗೃತಿ‌ ಮೂಡಿಸುತ್ತಾ ಸಮಾಜ ಬೆಳಗುವಂತೆ, ಸಂಸಾರ ಬೆಳಗುವಂತೆ ಮಾಡಿದ್ದಾರೆ. ಜನರಿಗೆ ವೃತ್ತಿಪರ ತರಬೇತಿ ನೀಡಲು ಬಹಳಷ್ಟು ಶ್ರಮವಹಿಸಿದ್ದಾರೆ.ಅವರ ವಿಚಾರಧಾರೆ, ಸಂದೇಶ, ಹೋರಾಟ, ಮನುಷ್ಯತ್ವವನ್ನು ಕಟ್ಟುವಂತಹ ಚಳುವಳಿ ನಮಗೆಲ್ಲ ಪ್ರೇರಣೆಯಾಗಲಿ” ಎಂದು ಹೇಳಿದರು. ಯುವ ವಾಹಿನಿ ಕೇಂದ್ರ ಮಂಗಳೂರು ಇದರ ಪ್ರಥಮ ಉಪಾಧ್ಯಕ್ಷೆ ವಿದ್ಯಾರಾಕೇಶ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಮಾತನಾಡಿದರು. 2025 – 26 ನೇ ಸಾಲಿನ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದ ದ್ವಿತೀಯ ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ಮಂಗಳೂರು ವಿಶ್ವವಿದ್ಯಾಲಯ ನಡೆಸಿದ ಬಿಎಸ್ಸಿ ಎನಿಮೇಶನ್ ಮತ್ತು ದೃಶ್ಯ ಪರಿಣಾಮಗಳು ವಿಭಾಗದಲ್ಲಿ ಪ್ರಥಮ ರ್ಯಾಂಕ್ ಪಡೆದ ವಿದ್ಯಾರ್ಥಿನಿ ಪೂರ್ಣಾ ಸಿ.ಇವರನ್ನು ಶಾಲು,ಹೊದಿಸಿ,ಫಲ,ಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.


ವೇದಿಕೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಕುಮಾರ್ ಸಾರಕರೆ,ಸುಳ್ಯ ಯುವ ವಾಹಿನಿ ಅಧ್ಯಕ್ಷ ಮಹೇಶ್ ಕಲ್ಪಣೆ, ಕಾರ್ಯದರ್ಶಿ ರಂಜಿತ್ ದರ್ಖಾಸ್ತು, ಕಟ್ಟಡ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಅಲೆಕ್ಕಾಡಿ, ಗೌರವಾಧ್ಯಕ್ಷ ಎನ್.ಎಸ್.ಡಿ.ವಿಠಲದಾಸ್ ಉಪಸ್ಥಿತರಿದ್ದರು.
ಶ್ರೀಮತಿ ನೂತನ ಪ್ರವೀಣ್ ನೆಟ್ಟಾರು ಸ್ವಾಗತಿಸಿ, ವಿದ್ಯಾರ್ಥಿಗಳು ಪ್ರಾರ್ಥಿಸಿ, ಚಂದ್ರಶೇಖರ ಹೈದಂಗೂರು ಕಾರ್ಯಕ್ರಮ ನಿರೂಪಿಸಿ, ಯುವ ವಾಹಿನಿ ಮಾಜಿ ಅಧ್ಯಕ್ಷ ಹರೀಶ ಕಾವಿನಮೂಲೆ ವಂದಿಸಿದರು. ಬೆಳಿಗ್ಗೆ ಪುರೋಹಿತರಾದ ಪಿ.ಡಿ.ಹರೀಶ ಶಾಂತಿ ಪುತ್ತೂರು ಇವರ ನೇತೃತ್ವದಲ್ಲಿ ಗುರುಪೂಜೆ ನಡೆಯಿತು. ಪೂರ್ವಾಹ್ನ ಯುವ ವಾಹಿನಿ ಸುಳ್ಯ ಘಟಕದವರಿಂದ ಭಜನಾ ಸಂಕೀರ್ತನೆ, ಗುರುಪೂಜೆ ನಡೆಯಿತು.