














ಕರ್ನಾಟಕ ಸರಕಾರ,ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀರಣ ಮತ್ತು ಕ್ರೀಡಾ ಇಲಾಖೆ,ಶಾಲಾ ಶಿಕ್ಷಣ ಇಲಾಖೆ ತಾಲೂಕು ಪಂಚಾಯತ್ ಸುಳ್ಯ, ನಗರ ಪಂಚಾಯತ್ ಸುಳ್ಯ ಗ್ರಾಮ ಪಂಚಾಯತ್ ಪಂಜ, ಕೆ.ಪಿ.ಎಸ್. ಪಂಜ,ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಮತ್ತು ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ (ರಿ.) ಇವುಗಳ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಕ್ರೀಡಾಕೂಟ 2026-27 ಸೆ. 20. ರಂದು ಪಂಜ ಸರಕಾರಿ ಜೂನಿಯರ್ ಕಾಲೇಜಿನ ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿ ನಡೆಯಿತು.
ಕ್ರೀಡಾಕೂಟವನ್ನು ಶಾಸಕಿ ಕು. ಭಾಗೀರಥಿ ಮುರುಳ್ಯ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ದಕ ಜಿಲ್ಲಾ ಗ್ಯಾರೆಂಟಿ ಅನುಷ್ಠಾನದ ಅಧ್ಯಕ್ಷ ಭರತ್ ಮಂಡೋಡಿ, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಪವನ್ ಪಲ್ಲತ್ತಡ್ಕ, ಕಾಲೇಜು
ಕ್ರೀಡಾ ಅಭಿವೃದ್ದಿ ಸಮಿತಿ ಅಧ್ಯಕ್ಷ ಹಾಗೂ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಯೋಗೀಶ್ ಚಿದ್ಗಲ್ಲು, ಯುವಜನ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ದೇವರಾಜ ಮುತ್ಲಾಜೆ, ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಹಿತೇಶ್ ಪಂಜದಬೈಲು , ಶಶಿದಾಸ್ ನಾಗತೀರ್ಥ, ಎಸ್ ಡಿ ಎಂ ಸಿ ಅಧ್ಯಕ್ಷ ರೋಹಿತಾಕ್ಷ ಚೀಮುಳ್ಳು, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸುಚಿನ್ನ ಕಾಣಿಕೆ, ಗ್ರಾಮ ಪಂಚಾಯತ್ ನಿಕಟ ಪೂರ್ವ ಉಪಾಧ್ಯಕ್ಷ ನಾರಾಯಣ ಕೃಷ್ಣನಗರ, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಲಿಗೋಧರ ಆಚಾರ್ಯ,ನಿವೃತ್ತ ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಮಾಧವ ಬಿಕೆ, ಕಡಬ ತಾಲೂಕು ತೀರ್ಪುಗಾರರ ಮಂಡಳಿ ಅಧ್ಯಕ್ಷ ಪದ್ಮನಾಭ ಏನೆಕಲ್ಲು, ಪ್ರಾಂಶುಪಾಲ ಚಿದಾನಂದ, ಮುಖ್ಯ ಶಿಕ್ಷಕ ದೇವಿ ಪ್ರಸಾದ್, ಪದ್ಮನಾಭ ಕಮಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಧನಂಜಯ ಸ್ವಾಗತಿಸಿದರು. ದೇವರಾಜ ಮುತ್ಲಾಜೆ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಪುಷ್ಟಾವತಿ ವಂದಿಸಿದರು.







