













ಮುರುಳ್ಯ ಗ್ರಾಮದ ಅಲೆಕ್ಕಾಡಿಯಲ್ಲಿ ವೃದ್ಧೆಯೋರ್ವರು ಕಳೆನಾಶಕ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸೆ.20 ರಂದು ನಡೆದಿದೆ. ಅಲೆಕ್ಕಾಡಿಯ ವಾರಿಜಾ (79) ಎಂಬವರು ಬೆಳಿಗ್ಗೆ ಮನೆಯಲ್ಲಿ ಕಳೆನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದು ಅವರನ್ನು ಕೂಡಲೇ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಜಯಪ್ರಕಾಶ ಎಂಬವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.







