













ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಪ್ರಣವ ಫೌಂಡೇಶನ್ ಬೆಂಗಳೂರು ಮತ್ತು ಆರ್ ವಿ ಇಂಜಿನಿಯರಿಂಗ್ ಕಾಲೇಜ್ ಬೆಂಗಳೂರು ಜಂಟಿಯಾಗಿ ಆಯೋಜಿಸಿರುವ ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ ಕಾಂತಮಂಗಲ ಶಾಲೆಯಲ್ಲಿ ನಡೆಯಿತು.ಎಲ್ಲ ವಿದ್ಯಾರ್ಥಿಗಳಿಗೆ ಅವರ ಕಲಿಕಾ ಪಯಣಕ್ಕೆ ಅನುಕೂಲವಾಗುವಂತೆ ಉಚಿತವಾದ ನೋಟ್ ಪುಸ್ತಕಗಳನ್ನು ನೀಡಲಾಯಿತು. ಪ್ರಣವ ಫೌಂಡೇಶನ್ ಅಧ್ಯಕ್ಷ ರಾಕೇಶ್ ರೈ, ಆರ್ ವಿ ಇಂಜಿನಿಯರಿಂಗ್ ಕಾಲೇಜಿನ ಮುಖ್ಯಸ್ಥರು ಡಾ. ಉಮಾ, ಫೌಂಡೇಶನ್ ಇತರ ಪದಾಧಿಕಾರಿಗಳಾದ ಶ್ರೀಮತಿ ಸುಮಾನಾಗರಾಜ್, ರಕ್ಷಿತ್ ಕೆ ಪಿ, ಮಹೇಶ್ ಕುಮಾರ್ ಮೇನಾಲ, ನಾಗರಾಜ್ ಜಿ ಆರ್ , ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಸ್. ಡಿ. ಎಂ. ಸಿ ಅಧ್ಯಕ್ಷರು,ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸಿದರು.







