













ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರಿಗೆ ವಿಕಲಚೇತನರ ಮೂಲಕವೇ ಅವರು ವಾಸಿಸುವ ವ್ಯಾಪ್ತಿಯಲ್ಲಿ ಶೈಕ್ಷಣಿಕ ಉದ್ಯೋಗ ತರಬೇತಿ, ಆರ್ಥಿಕ ಪುನರ್ವಸತಿ ಮತ್ತು ಸಾಮಾಜಿಕ ಭದ್ರತೆ ಸೌಲಭ್ಯವನ್ನು ಕಲ್ಪಿಸುವ ದೃಷ್ಟಿಯಿಂದ ಪುನರ್ವಸತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡುವ ಸಲುವಾಗಿ ಮಂಗಳೂರು ತಾಲೂಕಿನ ಉಳಾಯಿಬೆಟ್ಟು, ಮೂಡಬಿದ್ರೆ ತಾಲೂಕಿನ ಪುತ್ತಿಗೆ, ಬಂಟ್ವಾಳ ತಾಲೂಕಿನ ಸರಪಾಡಿ, ಸುಳ್ಯ ತಾಲೂಕಿನ ಅಲೆಟ್ಟಿ ಹಾಗೂ ಪೆರುವಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುವ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹತೆ: 1. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ವಿಕಲಚೇತನರಾಗಿರಬೇಕು. (ಸ್ಥಳೀಯರಾಗಿರಬೇಕು- ಈ ಬಗ್ಗೆ ಸ್ಥಳೀಯ ಪಂಚಾಯಿತಿಯಿಂದ ಧೃಡೀಕರಣ ಸಲ್ಲಿಸತಕ್ಕದ್ದು) 2. ವಿದ್ಯಾರ್ಹತೆ-ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿದ್ದು, ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. 3. ವಯೋಮಿತಿ 18-45 ವರ್ಷದ ಒಳಗಿರಬೇಕು ಮತ್ತು ಪುನಶ್ಚತನ ಸೇವೆ ಸಲ್ಲಿಸಲು ಆಸಕ್ತಿ ಇರಬೇಕು. 4. ವಿಕಲಚೇತನರಾಗಿಬೇಕು, ವಿಕಲತೆಯು ಕನಿಷ್ಠ ಶೇ.40 ರಷ್ಟಿರಬೇಕು. 5. ಅಂಗವಿಕಲತೆಯ ಬಗ್ಗೆ ವಿಶಿಷ್ಟ ಗುರುತಿನ ಚೀಟಿಯನ್ನು (ಯು.ಡಿ.ಐ.ಡಿ) ಹೊಂದಿರಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:22.10.2026 ಆಗಿದ್ದು, ಅರ್ಜಿ ನಮೂನೆಯನ್ನು ಮಂಗಳೂರು, ಬಂಟ್ವಾಳ ಹಾಗೂ ಸುಳ್ಯ ತಾಲೂಕು ಪಂಚಾಯತ್ ಕಛೇರಿಯಲ್ಲಿ ಪಡೆದುಕೊಳ್ಳುವುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:0824-2455999 ಅರ್ಜಿ ನಮೂನೆಗಳಿಗಾಗಿ ಕಛೇರಿ ವೇಳೆಯಲ್ಲಿ ಸಂಪರ್ಕಿಸುವುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು, ದ.ಕ ಮಂಗಳೂರುರವರು ಪ್ರಕಟಣೆ ನೀಡಿರುತ್ತಾರೆ.







