














ಕೆವಿಜಿ ಎಂಜಿನಿಯರಿಂಗ್ ಕಾಲೇಜು ಸುಳ್ಯ ಇದರ ಎನ್ಎಸ್ಎಸ್ ಘಟಕದ ವತಿಯಿಂದ ಸುಳ್ಯ ಎಪಿಎಂಸಿ ಆವರಣದಲ್ಲಿ ಸ್ವಚ್ಛತಾ ಅಭಿಯಾನವನ್ನು ಸೆ.24 ರಂದು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಪ್ರೊ. ಸತ್ಯಜಿತ್ ಎಂ., ಸಹಾಯಕ ಕಾರ್ಯಕ್ರಮಾಧಿಕಾರಿ ಪ್ರೊ. ಲಕ್ಷ್ಮೀನಾರಾಯಣ ಎನ್. ಹಾಗೂ ಎನ್ಎಸ್ಎಸ್ ವಿದ್ಯಾರ್ಥಿ ಸ್ವಯಂಸೇವಕರು ಭಾಗವಹಿಸಿ ಎಪಿಎಂಸಿ ಆವರಣದ ವಿವಿಧ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಂಡರು. ಆವರಣದಲ್ಲಿ ಬಿದ್ದಿದ್ದ ಕಸ ಹಾಗೂ ತ್ಯಾಜ್ಯವನ್ನು ತೆರವುಗೊಳಿಸಿ ಪರಿಸರವನ್ನು ಸ್ವಚ್ಛವಾಗಿಡುವ ಕುರಿತು ಜಾಗೃತಿ ಮೂಡಿಸಲಾಯಿತು.
ಈ ಸ್ವಚ್ಛತಾ ಅಭಿಯಾನಕ್ಕೆ ಎಪಿಎಂಸಿ ಅಧಿಕಾರಿ ಮುದ್ದುಕೃಷ್ಣ ಅವರು ಅಗತ್ಯ ಸಹಕಾರ ನೀಡಿದರು. ಎನ್ಎಸ್ಎಸ್ ಘಟಕದ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿ ಸ್ವಯಂಸೇವಕರ ಸಕ್ರಿಯ ಭಾಗವಹಿಸುವಿಕೆಯಿಂದ ಕಾರ್ಯಕ್ರಮ ಯಶಸ್ವಿಯಾಗಿದ್ದು
ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ, ಆಡಳಿತ ಮಂಡಳಿ ಸಹಕಾರ ನೀಡಿದರು.







