ಸೆ.26 ರಂದು ಬೀಜದಕಟ್ಟೆ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ತಿಪಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಟಿ ಶರ್ಟ್ ಮತ್ತು ಸ್ಟೇಷನರಿ ಕಿಟ್ ವಿತರಣೆ ಮತ್ತು ಸಾಂಸ್ಕೃತಿಕ ಸಂಭ್ರಮ

0

ಬೀಜದಕಟ್ಟೆ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ತಿಪಟೂರು ತಾಲೂಕಿನ ಬಿಸಲೆಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಟಿ-ಶರ್ಟ್ ಹಾಗೂ ಸ್ಟೇಷನರಿ ಕಿಟ್ ವಿತರಣೆ ಮತ್ತು ಸಾಂಸ್ಕೃತಿಕ ಸಂಭ್ರಮ
ಕಾರ್ಯಕ್ರಮವನ್ನು ಸೆ26 ರಂದು ಆಯೋಜಿಸಲಾಗಿದೆ.

ಕಾರ್ಯಕ್ರಮದ ಅಂಗವಾಗಿ ಶಾಲೆಯ ವಿದ್ಯಾರ್ಥಿಗಳಿಗೆ ಟಿ-ಶರ್ಟ್ ಹಾಗೂ ನೋಟ್‌ಬುಕ್, ಪೆನ್, ಪೆನ್ಸಿಲ್, ಶಾರ್ಪನರ್, ಎರೇಸರ್ ವಿವಿಧ ಶೈಕ್ಷಣಿಕ ಸಾಮಗ್ರಿಗಳನ್ನು ಒಳಗೊಂಡ ಸ್ಟೇಷನರಿ ಕಿಟ್‌ಗಳನ್ನು ವಿತರಿಸಲಾಗುವುದು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಬೀಜದಕಟ್ಟೆ ಸಾಂಸ್ಕೃತಿಕ ಪ್ರತಿಷ್ಠಾನ (ನೋಂ) ಅಧ್ಯಕ್ಷರಾದ ಶ್ರೀ ನಟರಾಜು ಬಿ ಅವರು ತಿಳಿಸಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಸಾಮಾಜಿಕ ಕಾರ್ಯಕರ್ತರು, ಮಾನವ ಸಂಪನ್ಮೂಲ ಅಭಿವೃದ್ಧಿ ಕ್ಷೇತ್ರದ ಯುವ ಸಾಧಕರು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಹಾಗೂ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ (ನೋಂ) ಅಧ್ಯಕ್ಷರಾದ ಡಾ. ಉಮ್ಮರ್ ಬೀಜದಕಟ್ಟೆ* ಅವರು ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಬಿಸಲೆಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ
ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಆಸಕ್ತಿ, ಸೃಜನಶೀಲತೆ ಹಾಗೂ ಸಾಮಾಜಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.