ಪಂಜದಲ್ಲಿ ಪ್ರಜಾಸೇವೆ ಅಭಿಯಾನ

0

ರಾಜ್ಯ ಸರಕಾರ ಪ್ರಜಾಸೇವೆ ಅಭಿಯಾನ ಆಯೋಜನೆ ಮಾಡಿದ್ದು ಸೆ.೨೬ರಂದು ಪ್ರಜಾಸೇವೆ ಅಭಿಯಾನವು ಪಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ತಹಶೀಲ್ದಾರ್ ಸಹಿತ ಎಲ್ಲಾ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದು, ಸಾರ್ವಜನಿಕರು ಅರ್ಜಿ – ಅಹವಾಲುಗಳನ್ನು ಸಲ್ಲಿಸಲು ಅವಕಾಶವಿದೆ.
ವೇದಿಕೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಸುಳ್ಯ ತಹಶೀಲ್ದಾರ್ ಮಂಜುಳಾ, ಇಒ ರಾಜಣ್ಣ, ಸೂಡಾ ಅಧ್ಯಕ್ಷ ಕೆ.ಎಂ.ಮುಸ್ತಫಾ, ಗ್ಯಾರೆಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಗ್ಯಾರೆಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ಇದ್ದರು.

ತಹಶೀಲ್ದಾರ್ ಮಂಜುಳಾ ಸ್ವಾಗತಿಸಿದರು.