ಪ್ರವೀಣ್ ಬೆಳ್ಳಾರೆ ಅವರಿಗೆ ಮ್ಯಾಕ್ಸ್ ಲೈಫ್ ಮಂಗಳೂರಿನ ಸೇವಾ ರತ್ನ ಪ್ರಶಸ್ತಿ

0


ಅಳಿವಿನಂಚಿನಲ್ಲಿರುವ ಮಲೆನಾಡು ಗಿಡ್ಡ ಗೋವುಗಳನ್ನು ಸಂರಕ್ಷಿಸಿ ಸಂವರ್ಧನೆ ಮಾಡುತ್ತಿರುವ ಯುವ ಗೋಪಾಲಕ ಪ್ರವೀಣ್ ಬೆಳ್ಳಾರೆ ಅವರಿಗೆ ಜಿಲ್ಲಾ ಮಟ್ಟದ ಸೇವಾ ರತ್ನ ಪ್ರಶಸ್ತಿಯನ್ನು ಮಂಗಳೂರಿನ ಅತ್ತಾವರದಲ್ಲಿರುವ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ನ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು. ಮ್ಯಾಕ್ಸ್ ಲೈಫ್ ಮತ್ತು ಆಕ್ಸಿಸ್ ಬ್ಯಾಂಕ್ ಸಹಯೋಗದಲ್ಲಿ ಈ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಮುಖರು ಹಾಗೂ ಸಿಬಂದಿ ವರ್ಗದವರು ಉಪಸ್ಥಿತರಿದ್ದರು.