ಅಂತರ್ ಜಿಲ್ಲಾ ಮಟ್ಟದ ಮಾಸ್ಟರ್ಸ್ ಕ್ರೀಡಾಕೂಟದ ರವಿ ಚಲ್ಲಕೋಡಿ ಅವರಿಗೆ ಚಿನ್ನ ಮತ್ತು ಬೆಳ್ಳಿ ಪದಕ

0

ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಅಂತರ್ ಜಿಲ್ಲಾ ಮಟ್ಟದ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ಐವತ್ತೊಕ್ಲು ಗ್ರಾಮದ ಕೃಷಿಕ, ಜಾದೂ ಹಾಗೂ ಜನಪದ ಕಲಾವಿದ ರವಿ ಚಲ್ಲಕೋಡಿ ಇವರು ಚಕ್ರ ಎಸೆತದಲ್ಲಿ ಚಿನ್ನದ ಪದಕ ಹಾಗೂ ಹ್ಯಾಮರ್ ಎಸೆತದಲ್ಲಿ ಬೆಳ್ಳಿ ಪದಕ ಗಳಿಸಿರುತ್ತಾರೆ.