














ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಎನ್.ಎಸ್.ಎಸ್ ದಿನಾಚರಣೆಯನ್ನು ಸೆ.29 ರಂದು ಹಮ್ಮಿಕೊಂಡಿತು. ಕಾರ್ಯಕ್ರಮದಲ್ಲಿ ದೇಹದ ನ್ಯೂನತೆ ಗಳಿದ್ದರೂ ಮಾದ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾ ಸುಳ್ಯ ಅಮರ ಸುದ್ದಿ ಪತ್ರಿಕೆಯ ವರದಿಗಾರರಾಗಿರುವ ಉಲ್ಲಾಸ್ ಕಜ್ಜೋಡಿ ಇವರನ್ನು ಸನ್ಮಾನಿಸಲಾಯಿತು
ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ್ ಪಿ ಟಿ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿಯ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಡಾ. ಕುಶಾಲಪ್ಪ ಎಸ್ ಇವರು ಮುಖ್ಯ ಅತಿಥಿಯಾಗಿ ಎನ್ಎಸ್ಎಸ್ ನ ಮಹತ್ವ ಹಾಗೂ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಎನ್ಎಸ್ಎಸ್ ಸಹಕಾರಿಯಾಗುತ್ತದೆ ಎಂದು ಸ್ವಯಂಸೇವಕರಿಗೆ ತಿಳಿಸಿದರು. . ಕಾರ್ಯಕ್ರಮದಲ್ಲಿ ಎನ್ಎಸ್ಎಸ್ ಘಟಕದ ಕಾರ್ಯಕ್ರಮ ಅಧಿಕಾರಿ ಮತ್ತು ಕಾಲೇಜಿನ ಐಕ್ಯೂಎಸಿ ಸಂಯೋಜಕಿ ಶ್ರೀಮತಿ ಶ್ರೀಲತಾ ಕಮಿಲಾ ಉಪಸ್ಥಿತರಿದ್ದರು. ಎನ್ ಎಸ್ ಎಸ್ ಘಟಕದ ಕಾರ್ಯಕ್ರಮ ಅಧಿಕಾರಿ ಶ್ರೀಮತಿ ಸುಮಿತ್ರ ಸ್ವಾಗತಿಸಿ, ರೂಪಿಕಾ ವಂದಿಸಿದರು. ಕಾರ್ಯಕ್ರಮವನ್ನು ಸುಶ್ಮಿತಾ ನಿರೂಪಿಸಿದರು.







