ಸೋಣಂಗೇರಿ ಅಂಗನವಾಡಿ ಕೇಂದ್ರದಲ್ಲಿ ಪೋಷನ್ ಮಾಸಾಚರಣೆ ಮತ್ತು ಮಕ್ಕಳ ಸಂಭ್ರಮ ಕಾರ್ಯಕ್ರಮ

0

ಸೋಣಂಗೇರಿ ಅಂಗನವಾಡಿ ಕೇಂದ್ರದಲ್ಲಿ ಪೋಷನ್ ಮಾಸಾಚರಣೆ ಮತ್ತು ಮಕ್ಕಳ ಸಂಭ್ರಮ ಕಾರ್ಯಕ್ರಮ ಅ. 5 ರಂದು ನಡೆಯಿತು.

ಶಾಸಕಿ ಭಾಗೀರಥಿ ಮುರುಳ್ಯ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಜಾ, ಮೇಲ್ವಿಚಾರಕಿ ಉಷಾ, ಸೋಣoಗೇರಿ ಶಾಲಾ ಮುಖ್ಯ ಶಿಕ್ಷಕಿ ಕುಸುಮಾವತಿ, ಎಸ್ ಡಿ ಎಂ ಸಿ ಅಧ್ಯಕ್ಷ ಚಿದಾನಂದ ಕುಕ್ಕಂದೂರು ಉಪಸ್ಥಿತರಿದ್ದರು.

ಇದೇ ಸಂದರ್ಭ
ಅಂಗನವಾಡಿ ಕೇಂದ್ರ ನಿರ್ಮಿಸಿಕೊಟ್ಟ ಪವನ್ ಕುಮಾರ್ ರವರನ್ನು ಸನ್ಮಾನಿಸಲಾಯಿತು. ಪೌಷ್ಟಿಕ ಆಹಾರ ಮಾಡಿಕೊಂಡು ಬಂದ ಸಂಘದ ಸದಸ್ಯರು ಹಾಗೂ ಮಕ್ಕಳ ಪೋಷಕರಿಗೆ ಬಹುಮಾನ ವಿತರಿಸಲಾಯಿತು.

ಶುಭ ಪ್ರಾರ್ಥಿಸಿದರು. ಸುಮಂಗಲಿ ಸ್ವಾಗತಿಸಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ರವಿಕಲಾ ವಂದಿಸಿದರು.