ದುಗ್ಗಲಡ್ಕ ಶ್ರೀ ದುಗ್ಗಲಾಯ ದೇವಸ್ಥಾನದಲ್ಲಿ ಒಂದು ದಿನದ ಪ್ರಶ್ನಾ ಚಿಂತನೆ

0

ದುಗ್ಗಲಡ್ಕದ ಶ್ರೀ ದುಗ್ಗಲಾಯ ದೈವಸ್ಥಾನದಲ್ಲಿ ಒಂದು ದಿನದ ಪ್ರಶ್ನಾ ಚಿಂತನೆ ಅ.5 ರಂದು ನಡೆಯಿತು.
ಕ್ಷೇತ್ರದಲ್ಲಿ ನಡೆಯಲಿರುವ ಜೀರ್ಣೋದ್ಧಾರ ಕಾರ್ಯಗಳು, ನಡಾವಳಿಗಳ ಬಗ್ಗೆ ಚಿಂತನೆ ನಡೆಸಲಾಯಿತು.


ಕುಂಟಾರು ರವೀಶ ತಂತ್ರಿಗಳ ಉಪಸ್ಥಿತಿಯಲ್ಲಿ, ಜ್ಯೋತಿಷ್ಯರಾದ ಮುಳ್ಳೇರಿಯಾದ ಶಾಜೀಶ್ ಮತ್ತು ಲಕ್ಷ್ಮೀನಾರಾಯಣರವರು ಪ್ರಶ್ನಾ ಚಿಂತನೆ ನಡೆಸಿದರು.
ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮೊಕ್ತೇಸರರಾದ ರಾಘವೇಂದ್ರ ಭಟ್ ಕಲ್ದಂಬೆ, ಆಡಳಿತ ಸಮಿತಿ ಅಧ್ಯಕ್ಷ ಕಜೆ ಕುಶಾಲಪ್ಪ ಗೌಡ, ಮಾಜಿ ಅಧ್ಯಕ್ಷರಾದ ಸುಂದರ ರಾವ್, ದಯಾನಂದ ಸಾಲಿಯಾನ್ ಮೂಡೆಕಲ್ಲು, ಕಾರ್ಯದರ್ಶಿ ಶೇಖರ ಕುದ್ಪಾಜೆ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕುಶ ನೀರಬಿದಿರೆ, ಮಹಿಳಾ ಸೇವಾ ಸಮಿತಿಯ ಅಧ್ಯಕ್ಷೆ ಪ್ರಭಾವತಿ ರೈ, ಯುವ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ನಾಯ್ಕ್, ಸಮಿತಿಯ ಸದಸ್ಯರು, ಊರ ಭಕ್ತಾದಿಗಳು ಉಪಸ್ಥಿತರಿದ್ದರು.