













ಪುತ್ತೂರಿನ ಕೋಟಿ ಚೆನ್ನಯ ಬಸ್ ನಿಲ್ದಾಣದ ಸಹಾಯಕ ಸಂಚಾರ ನೀರಿಕ್ಷಕರಾಗಿ ಬಾಳಿಲ ಗ್ರಾಮದ ಭಾಸ್ಕರ ಶೆಟ್ಟಿ ಭಜನಿಗುತ್ತುರವರು ಪದೋನ್ನತಿ ಹೊಂದಿದ್ದಾರೆ.
2022ರಿಂದ 2024ರ ತನಕ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸಂಚಾರ ನಿಯಂತ್ರಕರಾಗಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನೀರಿಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.
ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಶ್ರೀಮತಿ ಸೀಮಾ ಬಿ. ಶೆಟ್ಟಿ ಗೃಹಿಣಿಯಾದರೆ ಹಿರಿಯ ಪುತ್ರಿ ಕು. ಸನ್ಮಿತ ಶೆಟ್ಟಿ ಕೆ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿದ್ದಾರೆ. ಕಿರಿಯ ಪುತ್ರಿ ಸಮೃದ್ಧಿ ಶೆಟ್ಟಿ ಕೆ ಸುಳ್ಯದ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ದಂತ ವೈದ್ಯಕೀಯ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.







