ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ವಿದ್ಯಾರ್ಥಿಗಳಿಂದ NPTEL ಪರೀಕ್ಷೆಯಲ್ಲಿ ಸಾಧನೆ

0

ಸುಳ್ಯ: ಕುರುಂಜಿ ವೆಂಕಟ್ರಮಣ ಗೌಡ ಇಂಜಿನಿಯರಿಂಗ್ ಕಾಲೇಜಿನ(KVGCE) ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ೧೭ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದ NPTEL (National Programme on Technology Enhanced Learning) ಆನ್‌ಲೈನ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
IITಗಳಿಂದ ನಡೆಸಲ್ಪಡುವ ಈ ಕಠಿಣ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ತಮ್ಮ ವಿಷಯಗಳಲ್ಲಿ ಪ್ರಾವೀಣ್ಯತೆ ಸಾಧಿಸಿದ್ದಾರೆ. ಈ ಸಾಧನೆಗಾಗಿ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ ವಿ., ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ. ರಾಘವೇಂದ್ರ ಕೆ. ಬಾಬುರಾಯ ಕಾಮತ್, NPTEL ವಿಭಾಗದ ಸಂಯೋಜಕರಾದ ಪ್ರೊ. ಸುಧೀರ್ ಕೆ.ವಿ. ಸೇರಿದಂತೆ ಎಲ್ಲ ಬೋಧಕ, ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಯು ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದು, ಇಂತಹ ರಾಷ್ಟ್ರೀಯ ಮಟ್ಟದ ಕೋರ್ಸ್‌ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕಾಲೇಜಿನ ಆಡಳಿತ ಮಂಡಳಿ ಪ್ರೋತ್ಸಾಹ ನೀಡಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.