













ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಗೆ ನೂತನ ಸದಸ್ಯರಾಗಿ ನೇಮಕಗೊಂಡಿರುವ ಶಾಫಿ ಕುತ್ತಮೊಟ್ಟೆ ಯವರು ತಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ. ರಾಜೀನಾಮೆ ಪತ್ರವನ್ನು ಗ್ಯಾರಂಟಿ ಸಮಿತಿ ರಾಜ್ಯಾಧ್ಯಕ್ಷರಾಗಿರುವ ಹೆಚ್.ಎಂ.ರೇವಣ್ಣರಿಗೆ ಕಳುಹಿಸಿರುವುದಾಗಿ ತಿಳಿಸಿದ್ದಾರೆ.
ಕಳೆದ 24 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದೇನೆ. ವಿವಿಧ ಜವಾಬ್ದಾರಿ ನಿರ್ವಹಿಸಿದ್ದೇನೆ. ಇದೀಗ ನನ್ನ ಹೆಸರನ್ನು ನೂತನ ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯನಾಗಿ ಆಯ್ಕೆ ಮಾಡಿರುತ್ತಾರೆ. ಇದು ನನಗೆ ತುಂಬಾ ಬೇಸರ ತರಿಸಿದೆ. ನಾನು ಗ್ಯಾರಂಟಿ ಅನುಷ್ಟಾನ ಸಮಿತಿ ಸದಸ್ಯನಾಗಲು ಬಯಸಿದವನಲ್ಲ. ನಾನು ಇಷ್ಟು ವರ್ಷ ಪಕ್ಷಕ್ಕೆ ದುಡಿದಿರುವುದರಿಂದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷನಾಗಲು ಬಯಸಿದ್ದೆ.
ಆದುದರಿಂದ ನನ್ನ ಈ ಗ್ಯಾರಂಟಿ ಅನುಷ್ಟಾನ ಸಮಿತಿ ಸದಸ್ಯತ್ವವನ್ನು ಯಾವುದಾದರೂ ಕಾರ್ಯಕರ್ತನಿಗೆ ಕೊಟ್ಟು ನನ್ನನ್ನು ಅದರಿಂದ ತೆರವುಗೊಳಿಸಬೇಕಾಗಿ ವಿನಂತಿಸುತ್ತೇನೆ. ನಾನು ಅಧಿಕಾರ, ಹುದ್ದೆ ಬಯಸುವವನಲ್ಲ ನನಗೆ ಪಕ್ಷದ ಕೆಲಸ ಮೊದಲು ನನ್ನ ಆಸಕ್ತಿಯಿರುವುದು. ಆದುದರಿಂದ ನನ್ನ ಈ ರಾಜಿನಾಮೆ ಪತ್ರವನ್ನು ಅಂಗೀಕರಿಸಬೇಕಾಗಿ ಪ ಕೇಳಿಕೊಳ್ಳುತ್ತಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.







