













ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕದ ವಿಶೇಷ ವಾರ್ಷಿಕ ಶಿಬಿರವು ಅ. 17ರಿಂದ ಅ. 23ರ ವರೆಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬೀದಿಗುಡ್ಡೆಯಲ್ಲಿ ನಡೆಯಲಿದೆ.
ಶಿಬಿರದ ಅಧ್ಯಕ್ಷತೆಯನ್ನು ಮಹಾತ್ಮ ಗಾಂಧಿ ಗ್ರಾಮ ಪಂಚಾಯತ್ (ದತ್ತು ಗ್ರಾಮ)ಬಳ್ಪ ಇದರ ಆಡಳಿತ ಅಧಿಕಾರಿ ಶ್ರೀಕಾಂತ್ ವಹಿಸಲಿದ್ದಾರೆ. ಶಿಬಿರವನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯ.ಸ. ಅಧ್ಯಕ್ಷ ಹರೀಶ್ ಇಂಜಾಡಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯ.ಸ. ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಡಾ. ದಿನೇಶ್ ಪಿ.ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.







