ಶಶಿಕುಮಾರ್ ರೈ ಬಾಲ್ಯೊಟ್ಟು ಎಲ್ಲರ ವಿಶ್ವಾಸಕ್ಕೆ ಪಾತ್ರರಾದವರು : ಕೆ. ಸೀತಾರಾಮ ರೈ ಸವಣೂರು














” 1969 ತನಕ ಡಿಸಿಸಿ ಬ್ಯಾಂಕ್ ನಲ್ಲಿ ಸುಪರ್ ವೈಸರ್ ಆಗಿದ್ದ ನಾನು 1994ರಲ್ಲಿ ಉಪಾಧ್ಯಕ್ಷನಾದೆ. ಒಟ್ಟು 10 ವರ್ಷ ನಿರ್ದೇಶಕನಾಗಿ ಸೇವೆ ಸಲ್ಲಿಸಿದ್ದೇನೆ. ಶಶಿಕುಮಾರ್ ರೈ ಬಾಲ್ಯೊಟ್ಟುರವರು ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ರವರ ನಂಬಿಕೆಯನ್ನು ಉಳಿಸಿಕೊಂಡ ನಿರ್ದೇಶಕ. ಎಲ್ಲರ ವಿಶ್ವಾಸವನ್ನು ಗಳಿಸಿ, ಎಲ್ಲರ ಜೊತೆ ಬೆರೆತು ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ನಿರ್ದೇಶಕ ಮಾತ್ರವಲ್ಲದೆ, ಮುಂದೆ ಬ್ಯಾಂಕನ್ನು ಅಭಿವೃದ್ಧಿ ಕಡೆಗೆ ಕೊಂಡೊಯ್ಯುವ ಸಾಮರ್ಥ್ಯ ಹೊಂದಿದ ವ್ಯಕ್ತಿ. ಇದೀಗ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿಯ ನಿರ್ದೇಶಕರಾಗಿ ಮಹಾಮಂಡಳಿಯನ್ನು ಉನ್ನತ ಸ್ಥಾನಕ್ಕೆ ಏರಿಸುವ ಶಕ್ತಿ ಇವರಿಗೆ ಬರಲಿ ಎಂಬುದು ನನ್ನ ಹಾರೈಕೆ” ಎಂದು ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಕೆ.ಸೀತಾರಾಮ ರೈ ಸವಣೂರು ಹೇಳಿದರು. ಅವರು ಅ.10ರಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ಶಶಿಕುಮಾರ್ ರೈ ಬಾಲ್ಯೊಟ್ಟುರವರನ್ನು ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ದರ್ಬೆಯ ಪ್ರಶಾಂತ್ ಮಹಲ್ ನ ಸಭಾಂಗಣದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ನಿರ್ದೇಶಕರಾದ ಕುಶಾಲಪ್ಪ ಗೌಡ ಪಿ. ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಮಂಗಳೂರು ಇದರ ನಿರ್ದೇಶಕರಾದ ಚಿಕ್ಕಪ್ಪ ನ್ಯಾಕ್ ಭಾಗವಹಿಸಿದ್ದರು. ಆದರ್ಶ ಸಹಕಾರಿ ಸಂಘದ ಉಪಾಧ್ಯಕ್ಷ ಎನ್. ಸುಂದರ ರೈ ಸವಣೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಘದ ಮಹಾಪ್ರಬಂಧಕರಾದ ವಸಂತ್ ಜಾಲಾಡಿ ಶಶಿಕುಮಾರ್ ರೈ ಬಾಲ್ಯೊಟ್ಟುರನ್ನು ಪರಿಚಯಿಸಿದರು. ಪಾಂಡೇಶ್ವರ ಶಾಖೆಯ ವ್ಯವಸ್ಥಾಪಕಿ ಮಹಾಲಕ್ಷ್ಮಿ ಸನ್ಮಾನಪತ್ರ ವಾಚಿಸಿದರು.
ಸಂಘದ ಸಿಬ್ಬಂದಿ ಸವಿತಾ ಪ್ರಾರ್ಥಿಸಿದರು. ರೊ. ಕೆ. ಸೀತಾರಾಮ ರೈ ಸವಣೂರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ,
ಸಂಘದ ಸಹಾಯಕ ಮಹಾಪ್ರಬಂಧಕರಾದ ಸುನಾದ್ ರಾಜ್ ಶೆಟ್ಟಿ ವಂದಿಸಿದರು. ಸವಣೂರು ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಕಾರ್ಯಕ್ರಮ ನಿರೂಪಿಸಿದರು. ಸಂಘದ ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗದವರು ಹಾಗೂ ಹಲವು ಮಂದಿ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
” ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್.ರಾಜೇಂದ್ರ ಕುಮಾರ್ ರವರ ಕೃಪೆಯಿಂದ ನಾನು ಇವತ್ತು ಈ ಸ್ಥಾನಕ್ಕೆ ಬರಲು ಸಾಧ್ಯವಾಯಿತು.
ನಾನು ಸಹಕಾರಿ ರಂಗಕ್ಕೆ ಪಾದಾರ್ಪಣೆ ಮಾಡುವ ಸಮಯದಿಂದಲೇ ನನಗೆ ಮಾರ್ಗದರ್ಶನ ನೀಡಿದವರು ಸವಣೂರು ಸೀತಾರಾಮ ರೈಯವರು. ಸಹಕಾರಿ, ಉದ್ಯಮ, ಧಾರ್ಮಿಕ, ಸಾಮಾಜಿಕ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ದುಡಿದ ಸೀತಾರಾಮ ರೈಯವರು ಕೈಹಾಕಿದ ಕಾರ್ಯ ಅರ್ಧಕ್ಕೆ ನಿಂತದ್ದೇ ಇಲ್ಲ. ಆರಂಭಿಸಿದ ಎಲ್ಲಾ ಕ್ಷೇತ್ರಗಳಲ್ಲೂ ಯಶಸ್ಸನ್ನು ಕಂಡಿದ್ದಾರೆ. ಇವತ್ತು ನನ್ನನ್ನು ಸನ್ಮಾನಿಸಿ ಹರಸಿದ್ದಾರೆ. ಅವರ ಸಲಹೆ, ಮಾರ್ಗದರ್ಶನದೊಂದಿಗೆ ಸಹಕಾರ ಮಹಾಮಂಡಳಿಯನ್ನು ಉನ್ನತ ಸ್ಥಾನಕ್ಕೆ ಏರಿಸುವಲ್ಲಿ ಪ್ರಯತ್ನಿಸುತ್ತೇನೆ.
-ಶಶಿಕುಮಾರ್ ರೈ ಬಾಲ್ಯೊಟ್ಟು







