20 ವರ್ಷಗಳ ನಿರಂತರ ಕಾಯಕಕ್ಕೆ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ
ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ
ಆಕ್ಸಿಸ್ ಬ್ಯಾಂಕ್ ಹಾಗೂ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ವತಿಯಿಂದ ಕೊಡಮಾಡುವ ಜಿಲ್ಲಾಮಟ್ಟದ ‘ಸೇವಾರತ್ನ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ.














ಮoಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಅಚ್ಚುತ ನಾಯಕ್ ಅವರು ಕಳೆದ 20 ವರ್ಷಗಳಿಂದ ಪ್ರಾಮಾಣಿಕತೆ ಮತ್ತು ಕಾಯಕನಿಷ್ಠೆಯಿಂದ ಮಾಡಿಕೊಂಡು ಬರುತ್ತಿದ್ದಾರೆ.
ಕಳಂಜ ಗ್ರಾಮಕ್ಕೆ ಮಾತ್ರ ಸೀಮಿತವಾಗದೆ ಸುಳ್ಯ ತಾಲೂಕು ಹಾಗೂ ಹೊರ ತಾಲೂಕುಗಳ ವಿವಿಧ ಪ್ರದೇಶಗಳಿಗೆ ತೆರಳಿ, ರೈತರು ಮತ್ತು ಸಾರ್ವಜನಿಕರ ತೆಂಗಿನ ಮರಗಳಿಂದ ತೆಂಗಿನಕಾಯಿಗಳನ್ನು ಕೊಯ್ದು ತೆಗೆದುಕೊಡುವ ಸೇವೆಯನ್ನು ಅವರು ನಿರಂತರವಾಗಿ ಸಲ್ಲಿಸುತ್ತಿದ್ದಾರೆ.
ವರದಿ : ಉಮೇಶ್ ಮಣಿಕ್ಕಾರ







