













ಸುಳ್ಯ: ಇಲ್ಲಿನ ಕೆ.ವಿ.ಜಿ. ಕಾನೂನು ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಉಪಕ್ರಮದಡಿ, ರೆಡ್ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಮಾನವ ಹಕ್ಕುಗಳ ಕೋಶದ ಸಹಯೋಗದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕೆ.ವಿ.ಜಿ. ವೈದ್ಯಕೀಯ ಕಾಲೇಜಿನ ಮನೋವೈದ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ರಶ್ಮಿ ಕೆ. ಅವರು ಮಾನಸಿಕ ಆರೋಗ್ಯದ ಮಹತ್ವ, ಮಾನಸಿಕ ಒತ್ತಡದ ಪರಿಣಾಮಗಳು ಹಾಗೂ ದೈನಂದಿನ ಜೀವನದಲ್ಲಿ ಒತ್ತಡವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ವಿಧಾನಗಳ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದ ಗೌರವ ಅತಿಥಿಯಾಗಿ ಭಾಗವಹಿಸಿದ ಕಾಲೇಜಿನ ಆಡಳಿತಾಧಿಕಾರಿ ಪ್ರೊ. ಕೆ.ವಿ. ದಾಮೋದರ ಗೌಡ ಅವರು ಶುಭ ಹಾರೈಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಟೀನಾ ಹೆಚ್.ಎಸ್. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ನಯನ ಪಿ.ಯು. ಅವರು ಸ್ವಾಗತಿಸಿದರು. ಅಂತಿಮ ವರ್ಷದ ಬಿ.ಎ. ಎಲ್.ಎಲ್.ಬಿ. ವಿದ್ಯಾರ್ಥಿನಿ ಕುಮಾರಿ ಎಸ್. ಎಂ ಖದೀಯತ್ ಲೀನಾ ಕಾರ್ಯಕ್ರಮ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಅರ್ಚನಾ ಆರ್. ರೈ ವಂದಿಸಿದರು.








