













ಕನಕಮಜಲು ಗ್ರಾಮದ ಪೆರುಂಬಾರು ಮದಿಮಾಳು ಮುಖ ಶ್ರೀ ದುರ್ಗಾದೇವಿ ಅಮ್ಮನವರ ಸನ್ನಿಧಿಯಲ್ಲಿ ಮಹಾ ನವರಾತ್ರಿ ಉತ್ಸವ ಅ.16ರಂದು ನಡೆಯಿತು.
ಅ.11ರಂದು ಕ್ಷೇತ್ರದಲ್ಲಿ ನವರಾತ್ರಿ ಉತ್ಸವ ಆರಂಭಗೊಂಡಿತು. ಪ್ರತೀ ದಿನ ಸಂಜೆ ಭಜನಾ ಸೇವೆ ನಡೆಯಿತು.
ಅ.16ರಂದು ಕೆಮ್ಮಿಂಜೆ ಬ್ರಹ್ಮಶ್ರೀ ವೇದಮೂರ್ತಿ ತಂತ್ರಿ ಸುಬ್ರಹ್ಮಣ್ಯ ಬಳ್ಳುಕ್ಕುರಾಯರ ನೇತೃತ್ವದಲ್ಲಿ ಬೆಳಗ್ಗೆ ಶ್ರೀ ದೇವಿಗೆ ಪಂಚಾಮೃತ ಅಭಿಷೇಕ, ಅಲಂಕಾರಪೂಜೆ, ಹೂವಿನಪೂಜೆ ನಡೆಯಿತು.
ಮಧ್ಯಾಹ್ನ ಮಹಾಪೂಜೆ ನಡೆದು ಅನ್ನಸಂತರ್ಪಣೆ ವಿತರಣೆ ನಡೆಯಿತು. ಊರ ಹಾಗೂ ಪರವೂರ ಭಕ್ತರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.








