













ಕೊಚ್ಚಿಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಮೃತಪಟ್ಟ ಇಯಾಜ್ ಅವರ ಕನಕಮಜಲಿನ ಮನೆಗೆ
ಕಾಸರಗೋಡು ಶಾಸಕ ಕಲ್ಲಟ್ರ ಮಾಹಿನ್ ಹಾಜಿ, ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ. ಎಂ. ಶಹೀದ್ ತೆಕ್ಕಿಲ್ ಭೇಟಿ ನೀಡಿದರು.
ಇಯಾಜ್ ಅವರ ತಂದೆ ಪಿ.ಎ.ಇಬ್ರಾಹಿಂ ಹಾಗು
ಕುಟುಂಬಕ್ಕೆ ಸಾಂತ್ವನ ಹೇಳಿದ ಮುಖಂಡರು ಕುಟುಂಬಕ್ಕೆ ಎಲ್ಲಾ ರೀತಿಯ ನೆರವಿನ ಭರವಸೆ ನೀಡಿದರು. ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ. ಎಂ. ಮುಸ್ತಫ,ಅಶ್ರಫ್ ಪರಪ್ಪ ಇಂಡಿಯನ್, ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕೊಚ್ಚಿಯಲ್ಲಿ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಇಯಾಝ್ ಸಹಿತ ಮೂರು ಮಂದಿ ಮೃತಪಟ್ಟಿದ್ದರು.







