ಸತ್ಯದ ದಾರಿಯಲ್ಲಿ ನಡೆದರೆ ದೇವರ ಅನುಗ್ರಹ – ಶ್ರೀಮತಿ ಮಲ್ಲಿಕಾ ಪಕ್ಕಳ
ಇಂದು ಸಂಜೆ ಶ್ರೀ ಶಾರದಾ ದೇವಿಯ ವೈಭವದ ಶೋಭಾಯಾತ್ರೆ – ಜಲಸ್ತಂಭನ















ಬೆಳ್ಳಾರೆ ಗ್ರಾಮದ ಶ್ರೀ ಶಾರದಾಂಬಾ ಸೇವಾ ಸಮಿತಿ ದರ್ಖಾಸ್ತು ವತಿಯಿಂದ 21 ನೇ ವರ್ಷದ ಶ್ರೀ ಶಾರದೋತ್ಸವವು ಅ.20 ಬೆಳಿಗ್ಗೆ ಪ್ರಾರಂಭಗೊಂಡಿದ್ದು ಅ.21 ರವರೆಗೆ ನಡೆಯಲಿದೆ.
ಅ.20 ರಂದು ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ
ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಲ ಮಲಾರಬೀಡು ಇವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು “ಕರಾವಳಿ ಭಾಗದಲ್ಲಿ ನವರಾತ್ರಿ ಹಬ್ಬವನ್ನು ವಿಶೇಷವಾಗಿ ಸಂಭ್ರಮದಿಂದ ಆಚರಣೆ ಮಾಡುತ್ತಾರೆ.ಎಲ್ಲಾ ಕಡೆಗಳಲ್ಲಿ ಶ್ರೀ ಶಾರದಾ ದೇವಿಯನ್ನು ಆರಾಧಿಸುತ್ತಾರೆ.ಇತಿಹಾಸ ಹಿನ್ನಲೆ ಇರುವ ಕಾರ್ಯಕ್ರಮಗಳಿಗೆ ಮಕ್ಕಳನ್ನು ಹೆಚ್ಚು ಹೆಚ್ಚು ಕರೆದುಕೊಂಡು ಹೋಗಬೇಕು.ಇದರಿಂದ ಕಲೆ,ಸಂಸ್ಕೃತಿ ಉಳಿಯುವುದರ ಜೊತೆಗೆ ಸಂಸ್ಕಾರಯುತ ಜೀವನ ಮಾಡಲು ಸಾಧ್ಯವಾಗುತ್ತದೆ.ಸತ್ಯದ ದಾರಿಯಲ್ಲಿ ನಡೆಯುವಂತಾದರೆ ದೇವರ ಅನುಗ್ರಹ ಕೂಡ ಸಿಗುತ್ತದೆ” ಎಂದು ಅವರು ಹೇಳಿದರು.
ಶಾರದಾಂಬೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ನಂಜೆ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರ ಸಹಕಾರದಿಂದ ಶಾರದೋತ್ಸವ ಯಶಸ್ವಿಯಾಗಿ ನಡೆಯುತ್ತಿದೆ.ಮುಂದೆಯೂ ಇದೇ ರೀತಿ ಸಹಕಾರ ನೀಡಬೇಕೆಂದು ಹೇಳಿದರು.
ವೇದಿಕೆಯಲ್ಲಿ ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಆರ್.ಕೆ.ಭಟ್ ಕುರುಂಬುಡೇಲು,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಶ್ರೀಮತಿ ರಾಜೀವಿ ಆರ್.ರೈ, ಪ್ರದೀಪ್ ಕುಮಾರ್ ರೈ ಪನ್ನೆ, ಶಾರದೋತ್ಸವ ಸಮಿತಿ ಗೌರವಾಧ್ತಕ್ಷ ಸಾಂತಪ್ಪ ಗೌಡ ಕಲ್ಮಡ್ಕ,ಬೆಳ್ಳಾರೆ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಗಂಗಾಧರ ರೈ ಪುಡ್ಕಜೆ,ಶಾರದಾಂಬಾ ಮಹಿಳಾ ಮಂಡಳಿ ಅಧ್ಯಕ್ಷೆ ಶ್ರೀಮತಿ ಚಂದ್ರಕಲಾ ಹೊನ್ನಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸೃಷ್ಟಿ ದರ್ಖಾಸ್ತು ಪ್ರಾರ್ಥಿಸಿ,ನಾಗರಾಜ ದರ್ಖಾಸ್ತು,ಶ್ರೀಧರ ಚೂಂತಾರು ಕಾರ್ಯಕ್ರಮ ನಿರೂಪಿಸಿದರು.
ಸಾಧಕರಿಗೆ ಸನ್ಮಾನ
ಶಾರದಾಂಬಾ ಸಮಿತಿ ಮಾಜಿ ಅಧ್ಯಕ್ಷ ಚಂದ್ರಶೇಖರ ದರ್ಖಾಸ್ತು, ಹರ್ಡಲ್ಸ್ ನಲ್ಲಿ ಗೋಲ್ಡ್ ಮೆಡಲ್ ವಿಜೇತ ಕಿಶನ್ ಡಿ ಯವರನ್ನು ಶಾಲು ಹೊದಿಸಿ,ಫಲ,ಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ಸಾಂಸ್ಕೃತಿಕ ಕಾರ್ಯಕ್ರಮ
ಸಾರ್ವಜನಿಕರಿಂದ ಮತ್ತು ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನ ಕನಕಪುರ 65 ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಸಂಜೆ ಗಂಟೆ 6.30 ರಿಂದ ಡ್ಯಾನ್ಸ್ & ಬೀಟ್ಸ್ ಬೆಳ್ಳಾರೆ ಇವರಿಂದ ನೃತ್ಯ ಸಂಭ್ರಮ ನಡೆಯಿತು.
ಅ.21 ರಂದು ಬೆಳಿಗ್ಗೆ ನಡೆಯುವ ಕ್ರೀಡಾಕೂಟವನ್ನು ದರ್ಖಾಸ್ತು ಶಾಲಾ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಬುಸಾಲಿ ಉದ್ಘಾಟಿಸಲಿದ್ದಾರೆ.
ಸಂಜೆ ಗಂಟೆ 4.00 ಕ್ಕೆ ಕುಣಿತ ಭಜನೆ ನಡೆಯಲಿದೆ.ಗಂಟೆ 6.00 ಕ್ಕೆ ಶ್ರೀ ಶಾರದಾ ದೇವಿಯ ವಿಜೃಂಭಣೆಯ ಶೋಭಾಯಾತ್ರೆ ನಡೆದು ಜಲಸ್ತಂಭನಾ ನಡೆಯಲಿದೆ.
ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯ.ಸ.ಮಾಜಿ ಅಧ್ಯಕ್ಷ ಸುನಿಲ್ ರೈ ಪುಡ್ಕಜೆ ಶೋಭಾಯಾತ್ರೆಗೆ ಚಾಲನೆ ನೀಡಲಿದ್ದಾರೆ.









