













ಕಲ್ಮಡ್ಕ ಗ್ರಾಮದ ಹೊಳೆಕ್ಕರೆ ಎಂಬಲ್ಲಿ ತೋಡಿನಲ್ಲಿ ಮೀನು ಹಿಡಿಯುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಇಬ್ಬರು ಯುವಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ತೋಟಕ್ಕೆ ಅನಧಿಕೃತವಾಗಿ ವಿದ್ಯುತ್ ಅಳವಡಿಸಿರುವ ಆರೋಪಕ್ಕೊಳಗಾಗಿರುವ ತೋಟದ ಮಾಲಕ ಮಧುಸೂದನ ಭಟ್ ರವರು ಇಂದು ಸಂಜೆ ಬೆಳ್ಳಾರೆ ಪೊಲೀಸ್ ಠಾಣೆಗೆ ಸರೆಂಡರ್ ಆಗಿರುವುದಾಗಿ ತಿಳಿದು ಬಂದಿದೆ.
ಇವರನ್ನು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಕುಳ್ಳಿರಿಸಲಾಗಿದ್ದು , ಬಂಧನ ಪ್ರಕ್ರಿಯೆಗಳು ನಡೆಯುತ್ತಿರುವುದಾಗಿ ತಿಳಿದು ಬಂದಿದೆ.







