ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ರೈ ಯವರಿಗೆ ಪತ್ನಿ ವಿಯೋಗ

0

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹಾಗೂ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿರುವ ವಿಜಯವಾಣಿ ವರದಿಗಾರ ಪಿ.ಬಿ.ಹರೀಶ್ ರೈಯವರ ಧರ್ಮಪತ್ನಿ ಶ್ರೀಮತಿ ಉಷಾ ಕುಮಾರಿಯವರು ಇಂದು ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 56 ವರ್ಷ ವಯಸ್ಸಾಗಿತ್ತು. ಮಂಗಳೂರಿನ ಸೈಂಟ್ ಅಲೋಸಿಯೆಸ್ ಹೈಸ್ಕೂಲ್ ನಲ್ಲಿ 28 ವರ್ಷಗಳ ಕಾಲ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿದ್ದ ಅವರು ಅದಕ್ಕಿಂತ ಮೊದಲು ಮಂಗಳೂರಿನ ಚಿನ್ಮಯ ಹೈಸ್ಕೂಲ್ ಮತ್ತು ಉಳ್ಳಾಲದ ಭಾರತ್ ಹೈಸ್ಕೂಲ್ ನಲ್ಲಿಯೂ ಕಾರ್ಯನಿರ್ವಹಿಸಿದ್ದರು. ಕೆಲಸಮಯದಿಂದ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಅವರು ಪತಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ನಾಳೆ ಮಂಗಳೂರಿನಲ್ಲಿ ನಡೆಯಲಿರುವುದಾಗಿ ತಿಳಿದುಬಂದಿದೆ.