ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ – ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿಶೇಷ ಶಿಬಿರದ ಉದ್ಘಾಟನೆ

0

ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆಯಲಿರುವ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಅ. 26 ರಂದು ಚೊಕ್ಕಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಮರ ಸಹಕಾರ ಸೌಧ ಕುಕ್ಕುಜಡ್ಕದಲ್ಲಿ ನಡೆಯಿತು. ಶಿಬಿರದ ಮೊದಲನೇ ದಿನದ ಧ್ವಜಾರೋಹಣವನ್ನು ನೆರವೇರಿಸಿದ ಎಒಎಲ್ಇ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದರು ದೀಪ ಬೆಳಗಿಸುವುದರೊಂದಿಗೆ ಶಿಬಿರವನ್ನು ಉದ್ಘಾಟಿಸಿ ಎನ್.ಎಸ್.ಎಸ್ ವಿಧ್ಯಾರ್ಥಿಗಳಿಗೆ ಶುಭಹಾರೈಸುತ್ತಾ ಎನ್. ಎಸ್. ಎಸ್. ನ ಮೌಲ್ಯ ಹಾಗೂ ಮಹತ್ವವನ್ನು ತಿಳಿಸಿದರು.


ಕಾಲೇಜಿನ ಪ್ರಾಂಶುಪಾಲರು ಡಾ. ಲೀಲಾಧರ್ ಡಿ.ವಿ ಶಿಬಿರಾರ್ಥಿಗಳು ಶಿಸ್ತು ಪಾಲಿಸುತ್ತಾ ಒಂದು ವಾರ ಸೇವಾ ಮನೋಭಾವದಿಂದ ಶಿಬಿರವನ್ನು ಭಾಗವಹಿಸುವಂತೆ ಹೇಳಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸುಳ್ಯ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕೇಶವ ಗೌಡ ಕರ್ಮಜೆ, ನ್ಯಾಯವಾದಿ ಎನ್ ಜಯಪ್ರಕಾಶ್ ರೈ ಚೊಕ್ಕಾಡಿ ಹಾಗೂ ಕೆವಿಜಿ ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿಯಾದ ಡಾ. ವಿನಯ್ ಶಂಕರ್ ಭಾರಧ್ವಾಜ್ ಬಿ ಉಪಸ್ಥಿತರಿದ್ದು, ಶುಭಹಾರೈಸಿದರು. ವೇದಿಕೆಯಲ್ಲಿ ಕಾಲೇಜಿನ ಅಕಾಡೆಮಿಕ್ ಕೊ ಆರ್ಡಿನೇಟರ್ ಡಾ. ಕವಿತಾ ಬಿ ಎಂ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿಯಾದ ಡಾ. ಪ್ರಮೋದ ಪಿ ಎ, ಎನ್ ಎಸ್ ಎಸ್ ಘಟಕದ ನಾಯಕರುಗಳಾದ ಶ್ರೀನಿವಾಸ್ ಪಿ.ಜಿ ಹಾಗೂ ತ್ರಿಷಾ ಎಲ್ ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ಶಿಭಿರಾರ್ಥಿಗಳಾದ ಕು. ಮೇಧಾ ಮತ್ತು ತಂಡದವರು ಪ್ರಾರ್ಥಿಸಿ, ಶ್ರೀನಿವಾಸ್ ಸ್ವಾಗತಿಸಿ, ಕು. ತನುಷಾ ವಂದಿಸಿದರು. ಕು. ವಿದ್ಯಶ್ರೀ ಹಾಗೂ ಕು . ಧನ್ಯಶ್ರೀ ನಿರೂಪಿಸಿದರು.
ಶಿಬಿರವು ನ. 01ರ ತನಕ ಜರುಗಲಿರುವುದು. ಶಿಬಿರದಲ್ಲಿ ಗ್ರಾಮದ ವಿವಿಧ ಶಾಲೆಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ, ಆರೋಗ್ಯ ಸಮೀಕ್ಷೆಯನ್ನು ನಡೆಸಲಾಗುವುದು.