ಬೆಂಗಳೂರಲ್ಲಿರುವ ಕರಾವಳಿ ವಿದ್ಯಾರ್ಥಿಗಳಿಗೆ ದಕ್ಷಿಣ ಕನ್ನಡಿಗರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ

0

ಬೆಂಗಳೂರು: ಬೆಂಗಳೂರಲ್ಲಿ ನೆಲೆಸಿರುವ ಅವಿಭಜಿತ ದಕ್ಷಿಣ ಕನ್ನಡದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಇಲ್ಲಿದೆ.

2025-26ನೇ ಸಾಲಿನ ಎಸ್‌ಎಸ್ ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.94ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದಕ್ಷಿಣ ಕನ್ನಡಿಗರಸಂಘವು ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಿದೆ.

ಅರ್ಹ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯ ಪ್ರತಿ, ಭಾವಚಿತ್ರ, ಅಂಚೆ ವಿಳಾಸ ಹಾಗೂ ದೂರವಾಣಿ ಸಂಖೆಯ

ವಿವರಗಳೊಂದಿಗೆ ಅರ್ಜಿಯನ್ನು ಅ. 30ರೊಳಗೆ ಸಲ್ಲಿಸಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ನವೆಂಬರ್ 15 ರಂದು ಬೆಂಗಳೂರಿನ ಜೆ.ಸಿ. ರಸ್ತೆಯ ನಯನ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ದಕ್ಷಿಣ ಕನ್ನಡ ಸಂಘದ ಅಧ್ಯಕ್ಷರಾದ ಡಾ.ಕೆ.ಸಿ ಬಲ್ಲಾಳ್ ಅವರು ‘ಸುದ್ದಿ’ ತಿಳಿಸಿದ್ದಾರೆ.

ಅರ್ಜಿಗಳನ್ನು ದಕ್ಷಿಣ ಕನ್ನಡಿಗರ ಸಂಘ, ನಂ. 24, ನಮ್ಮ ಮನೆ, 5ನೇ ಮುಖ್ಯರಸ್ತೆ, 14ನೇ ಅಡ್ಡರಸ್ತೆ, ವೈಯಾಲಿಕಾವಲ್, ಬೆಂಗಳೂರು-560003 ಈ ವಿಳಾಸಕ್ಕೆ ಕಳುಹಿಸಬೇಕು ಎಂದು ಹೇಳಿದ್ದಾರೆ. ಹೆಚ್ಚಿನ ಮಾಹಿತಿಗೆ ಡಾ. ಕೆ.ಸಿ. ಬಲ್ಲಾಳ್ (9900567924) ಅಥವಾ ವೈ. ಜಯಂತರಾವ್ (9448274519) ಅವರನ್ನು ಸಂಪರ್ಕಿಸಬಹುದಾಗಿದೆ.

ನವೆಂಬರ್ 15 ರಂದು ಕರಾವಳಿ ರತ್ನ ಪ್ರಶಸ್ತಿ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭನಡೆಯಲಿದೆ. ಸಂಜೆ 4 ಗಂಟೆಗೆ ಕಾರ್ಯಕ್ರಮ ಆರಂಭ ಆಗಲಿದ್ದು, ಕನ್ನಡ-ತುಳು ಹಾಗೂ ಹಿಂದಿ ಹಾಡುಗಳನ್ನು ಸಿಎಸ್ ಇಂದಿರಾ ಹಾಗೂ ತಂಡದಿಂದ ಹಾಡಲಿದ್ದಾರೆ. 4-30 ರಿಂದ 6-30 ರ ವರೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. 6-30 ರಿಂದ 8 ಗಂಟೆಯವರೆಗೆ ಅಭಿಮನ್ಯು ಕಾಳಗ ಯಕ್ಷಗಾನ ನಡೆಯಲಿದೆ.