ಕಾಂಗ್ರೆಸ್ ಬಲವರ್ಧನೆಗೆ ಸಂಘಟನ್ ಸೃಜನ್ ಅಭಿಯಾನ: ಆರ್ ಪದ್ಮರಾಜ್ ಪೂಜಾರಿ

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ತನ್ನ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸಿಕೊಳ್ಳಲು ವಿಶೇಷವಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮವಾಗಿದೆ ಸಂಘಟನ್ ಸೃಜನ್ ಅಭಿಯಾನ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್. ಪದ್ಮರಾಜ್ ಪೂಜಾರಿ ಯವರು ಹೇಳಿದರು.















ಅಭಿಯಾನದ ಅಂಗವಾಗಿ ಅ 27 ರಂದು ಸುಳ್ಯ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆದ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕ್ಷೇತ್ರದಲ್ಲಿ ಎಲ್ಲರೂ ಒಗ್ಗೂಡಿ ಪಕ್ಷದ ಸಂಘಟನೆ ಬಲಪಡಿಸಲು ಶ್ರಮಿಸೋಣ .ಪಕ್ಷಕ್ಕಾಗಿ ದುಡಿದವರನ್ನು ಗುರುತಿಸುವಂತ ಕೆಲಸ ಕಾರ್ಯಗಳನ್ನು ಮಾಡುತ್ತಾ ಮುಂಬರುವ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆಗಳನ್ನು ಎದುರಿಸೋಣ ಎಂದು ಹೇಳಿದರು.
ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಟಿ ಎಂ ಶಹೀದ್ ತೆಕ್ಕಿಲ್,ಕೆಪಿಸಿಸಿ ವೀಕ್ಷಕರುಗಳಾದ ಡಾ. ಅಂಶು ಮಾತಾ,ಸತೀಶ್ ಚಿಕ್ಕಮಂಗಳೂರು, ಸದಾಶಿವ ಚಿಕ್ಕಮಂಗಳೂರು,ಗ್ಯಾರಂಟಿ ಅನುಷ್ಠಾನ ಸಮಿತಿಯ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಭರತ್ ಮುಂಡೋಡಿ, ಕಡಬ ತಾಲೂಕು ಅಧ್ಯಕ್ಷ ಜಿ.ಕೃಷ್ಣಪ್ಪ, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಮೊದಲಾದವರು ಉಪಸ್ಥಿತರಿದ್ದರು.
ರಾಧಾಕೃಷ್ಣ ಬೊಳ್ಳೂರು ರವರು ಸ್ವಾಗತಿಸಿ, ಕಾಂಗ್ರೆಸ್ ನಗರ ಅಧ್ಯಕ್ಷ ಶಶಿಧರ ಎಂ ಜೆ ಕಾರ್ಯಕ್ರಮ ನಿರೂಪಿಸಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭವಾನಿ ಶಂಕರ್ ಕಲ್ಮಡ್ಕ ವಂದಿಸಿದರು.ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಪಕ್ಷದ ಹಿರಿಯ ಮುಖಂಡರುಗಳು, ಕಾರ್ಯಕರ್ತರುಗಳು ಭಾಗವಹಿಸಿದ್ದರು.







