













ರಕ್ತೇಶ್ವರಿ ಸಾನಿಧ್ಯವುಳ್ಳ ಹಿಂದೂಗಳ ಕೃಷಿ ಭೂಮಿಯನ್ನು ವಕ್ಫ್ ಬೋರ್ಡ್ ಅಕ್ರಮವಾಗಿ ಮುಸ್ಲಿಂ ದಫನ ಭೂಮಿಯನ್ನಾಗಿ ಕಾಯ್ದಿರಿಸಿ ಹೊರಡಿಸಿರುವ ಆದೇಶದ ವಿರುದ್ಧ ಹಿಂದೂ ಹಿತರಕ್ಷಣಾ ವೇದಿಕೆ ಮುರುಳ್ಯ ವತಿಯಿಂದ ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನಾ ಸಭೆಗೆ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ
ಸಂಪೂರ್ಣ ಬೆಂಬಲ ನೀಡಿದ್ದಾರೆ .
ಈ ಭೂಮಿಯು ನೂರಾರು ವರ್ಷಗಳಿಂದ ಹಿಂದೂಗಳು ಕೃಷಿ ಮಾಡಿಕೊಂಡು ಬಂದಿರುವ ಭೂಮಿಯಾಗಿದ್ದು, ರಕೇಶ್ವರಿ ದೇವಸ್ಥಾನದ ಸಮೀಪದಲ್ಲಿದೆ. ಯಾವುದೇ ದಾಖಲೆ, ವಿಚಾರಣೆ ಇಲ್ಲದೆ ಏಕಾಏಕಿ ವಕ್ಫ್ ಬೋರ್ಡ್ ತನ್ನ ಆಸ್ತಿ ಎಂದು ಘೋಷಿಸಿರುವುದು ಖಂಡನೀಯವಾಗಿದ್ದು, ಇದು ಹಿಂದೂ ಸಮಾಜದ ಮೇಲೆ ನಡೆಯುವ ಲ್ಯಾಂಡ್ ಜಿಹಾದ್ ಮತ್ತು ದಬ್ಬಾಳಿಕೆ .ಈ ಅನ್ಯಾಯದ ಆದೇಶವನ್ನು ಕೂಡಲೇ ರದ್ದುಗೊಳಿಸಬೇಕೆಂದು ಒತ್ತಾಯಿಸಿ ಅಕ್ಟೋಬರ್ 28-ಬುಧವಾರ ಬೆಳಿಗ್ಗೆ 10:00 ಗಂಟೆಗೆ ಮುರುಳ್ಯದಲ್ಲಿ ನಡೆಯಲಿರುವ ಪ್ರತಿಭಟನಾ ಸಭೆಯಲ್ಲಿ ಎಲ್ಲಾ ಹಿಂದೂ ಬಾಂಧವರು, ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಶಾಸಕರು ಕರೆ ನೀಡಿದ್ದಾರೆ







