ಗುತ್ತಿಗಾರು ಬ್ಲೆಸ್ಡ್ ಕುರಿಯಾಕೋಸ್ ವಿದ್ಯಾ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ

0

ಗುತ್ತಿಗಾರುರಿನ ಬ್ಲೆಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಗುತ್ತಿಗಾರು ಇಲ್ಲಿ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ಅ. 24 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ರಾಜೇಶ್ ಮಾವಿನ ಕಟ್ಟೆ ವಹಿಸಿದ್ದರು. ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ನವೀನ್ ಕುಮಾರ್ ಜಾಕೆ, ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷರಾದ ಲಿಜೋ ಜೋಸ್, ಶಾಲಾ ಸಂಚಾಲಕಿ ಸಿಸ್ಟರ್ ಸಿಲ್ವಿಯಾ ಹಾಗೂ ಮುಖ್ಯ ಶಿಕ್ಷಕಿ ಸಿಸ್ಟರ್ ಟೀಸಾ ಜಾನ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಜಸ್ವಿನ್ ಕೆ.ಎಲ್. ಉಪಾಧ್ಯಕ್ಷರಾಗಿ ದೃತಿಕೆ ವಿ. ಹಾಗೂ ಕೋಶಾಧಿಕಾರಿಯಾಗಿ ಡಾ. ಚೇತಕ್ ಆಯ್ಕೆಯಾದರು.

ಕಾರ್ಯಕ್ರಮಕ್ಕೆ ಆಗಮಿಸಿದ ಹಿರಿಯ ವಿದ್ಯಾರ್ಥಿಗಳನ್ನು ವಾದ್ಯಘೋಷದೊಂದಿಗೆ ಪುಷ್ಪ ನೀಡಿ ಆತ್ಮೀಯವಾಗಿ ಸ್ವಾಗತಿಸಲಾಯಿತು
ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿಗಳಿಗಾಗಿ ವಿವಿಧ ಮನರಂಜನಾತ್ಮಕ ಆಟಗಳು ಹಾಗೂ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಹಳೆಯ ಸ್ನೇಹಿತರೊಂದಿಗೆ ಮತ್ತೆ ಒಂದಾಗಿ ಕಳೆದ ದಿನಗಳ ನೆನಪುಗಳನ್ನು ಮೆಲುಕು ಹಾಕಿದ ವಿದ್ಯಾರ್ಥಿಗಳು ಪರಸ್ಪರ ತಮ್ಮ ಅನುಭವಗಳನ್ನು ಹಂಚಿಕೊಂಡರು. ಆಟೋಟಗಳು ಮತ್ತು ಸ್ನೇಹಪೂರ್ಣ ಚಟುವಟಿಕೆಗಳು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದವು.
ಶಾಲೆಯೊಂದಿಗಿನ ಹಳೆಯ ವಿದ್ಯಾರ್ಥಿಗಳ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವುದು, ಶಾಲೆಯ ಅಭಿವೃದ್ಧಿಯಲ್ಲಿ ಅವರ ಸಹಕಾರವನ್ನು ಉತ್ತೇಜಿಸುವುದು ಕಾರ್ಯಕ್ರಮದ ಉದ್ದೇಶವಾಗಿತ್ತು. ವಸಂತಮಾಲಾ ಅವರು ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕರಾದ ರಜನೀಶ್ ಸಿ.ಬಿ. ಮತ್ತು ಶಾಂತಕುಮಾರಿ ಎಂ. ಅವರು ನಿರ್ವಹಿಸಿದರು.