ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ನಡೆಸುವ ಅಖಿಲ ಭಾರತಮಟ್ಟದ ಉಪನ್ಯಾಸಕರ ಅರ್ಹತಾ ಪರೀಕ್ಷೆ (ನೆಟ್) ಎಗ್ಸಾಮ್‌ಗೆ ಅರ್ಜಿ

Advt_Headding_Middle
Advt_Headding_Middle
Advt_Headding_Middle

ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ನಡೆಸುವ ಅಖಿಲ ಭಾರತಮಟ್ಟದ ಉಪನ್ಯಾಸಕರ ಅರ್ಹತಾ ಪರೀಕ್ಷೆ (ನೆಟ್) ಎಗ್ಸಾಮ್‌ಗೆ ಅರ್ಜಿ Friday, October 2nd, 2015 | shikshana | no responses ವಿಶ್ವವಿದ್ಯಾಲಯ ಧನಸಹಾಯ ಆಯೋಗ ಅಖಿಲ ಭಾರತಮಟ್ಟದ ಉಪನ್ಯಾಸಕರ ಅರ್ಹತಾ ಪರೀಕ್ಷೆಯು ಡಿಸೆಂಬರ್ 27 ರಂದು ನಡೆಯಲಿದ್ದು, ಇದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಮಾದರಿಯಲ್ಲಿಯೇ ಈ ಪರೀಕ್ಷೆಯೂ ನಡೆಯಲಿದ್ದು, ಯುಜಿಸಿ ಪರವಾಗಿ ಸಿಬಿಎಸ್‌ಇ ಈ ಪರೀಕ್ಷೆ ನಡೆಸಲಿದೆ, ದೇಶದ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಅಸಿsಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಹಾಗೂ ಜೂನಿಯರ್ ರಿಸರ್ಚ್ ಫೆಲೊಸಿಪ್ (ಜೆ ಆರ್‌ಎಫ್) ನೇಮಕಕ್ಕಾಗಿ ಕನ್ನಡ ಸೇರಿದಂತೆ ಒಟ್ಟು ೧೦೦ ವಿಷಯಗಳಲ್ಲಿ ಈ ಅರ್ಹತಾ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಜೆಆರ್‌ಎಫ್‌ಗಾಗಿ ಅರ್ಜಿ ಸಲ್ಲಿಸಬಹುದು. ಫೆಲೋಶಿಪ್‌ಗೆ ಆಯ್ಕೆಯಾದವರು ಉನ್ನತ ವ್ಯಾಸಂಗವನ್ನು ಆಯ್ಕೆ ಮಾಡಿಕೊಳ್ಳಬಹುದು. ಇಲ್ಲವೇ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಯನ್ನೂ ಪಡೆದುಕೊಳ್ಳಬಹುದು. ಐಐಟಿಗಳು ಮತ್ತು ಇತರ ರಾಷ್ಟ್ರೀಯ ಸಂಸ್ಥೆಗಳು ಫೆಲೋಶಿಪ್ ನೀಡಲಿದ್ದು, ಇದನ್ನು ಪಡೆಯಲು ಎರಡು ವರ್ಷ ಕಾಲಾವಕಾಶವಿರುತ್ತದೆ. ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಾಗಿ ಮಾತ್ರ ನೆಟ್ ಪರೀಕ್ಷೆ ಬರೆದವರಿಗೆ ಫೆಲೋಶಿಪ್ ನೀಡಲಾಗುವುದಿಲ್ಲ. ಅರ್ಜಿ ಸಲ್ಲಿಸುವಾಗಲೇ ಅಭ್ಯರ್ಥಿಗಳು ಯಾವುದಕ್ಕೆ ಅರ್ಜಿ ಸಲ್ಲಿಸುತ್ತಿದ್ದೇವೆ ಎಂಬುದನ್ನು ಸ್ಪಷ್ಟಪಡಿಸಬೇಕಾಗುತ್ತದೆ. ಅರ್ಹತೆಯೇನು?: ಸ್ನಾತಕೋತ್ತರ ಪದವಿಯಲ್ಲಿ ಶೇ.೫೫ (ಎಸ್ ಸಿ/ಎಸ್ ಟಿ ಅಭ್ಯರ್ಥಿಗಳು ಶೇ. ೫೦ ) ಗಳಿಸಿರುವ ಅಭ್ಯರ್ಥಿಗಳು ಈ ಅರ್ಹತಾ ಪರೀಕ್ಷೆ ತೆಗೆದುಕೊಳ್ಳಬಹುದು. ಅಂತಿಮ ವರ್ಷದ ಸ್ನಾತಕೋತ್ತರ ಪರೀಕ್ಷೆ ಎದುರಿಸುತ್ತಿರುವ ಅಭ್ಯರ್ಥಿಗಳೂ ಈ ಪರೀಕ್ಷೆಯನ್ನು ಬರೆಯಲು ಅರ್ಹರಾಗಿರುತ್ತಾರೆ ಆದರೆ ಅವರು ಸ್ನಾತಕೋತ್ತರ ಪರೀಕ್ಷೆಯಲ್ಲಿ ಶೇ. ೫೫ ಅಂಕ ಗಳಿಸಿದಲ್ಲಿ ಮಾತ್ರ ನೆಟ್ ಫಲಿತಾಂಶವನ್ನು ಪ್ರಕಟಿಸುವ ಸಂದರ್ಭದಲ್ಲಿ ಅವರನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ.ಅಸಿಸ್ಟೆಂಟ್ ಪ್ರೊಫೆಸರ್ ಆಗಲು ಅರ್ಹತೆ ಪಡೆಯುವ ಉದ್ದೇಶದಿಂದ ಪರೀಕ್ಷೆ ಬರೆಯುವವರಿಗೆ ಗರಿಷ್ಠ ವಯೋಮಿತಿಯಲ್ಲಿ ನಿರ್ಬಂಧವೇನೂ ಇಲ್ಲ. ಆದರೆ ಜೂನಿಯರ್ ರಿಸರ್ಚ್ ಫೆಲೋಶಿಪ್‌ಗಾಗಿ ಪರೀಕ್ಷೆ ಬರೆಯುವವರು ೨೮ ವರ್ಷದೊಳಗಿನ ವರಾಗಿರಬೇಕು. ಅಭ್ಯರ್ಥಿಗಳು ತಾವು ಸ್ನಾತಕೋತ್ತರ ಪದವಿ ಪಡೆದಿರುವ ವಿಷಯದ ಮೇಲೆಯೇ ನೆಟ್ ಎಗ್ಸಾಮ್ ತೆಗೆದುಕೊಳ್ಳಬೇಕು. ಈ ವಿಷಯ ಪಟ್ಟಿಯಲ್ಲಿರದಿದ್ದಲ್ಲಿ ಸಂಬಂಧಪಟ್ಟ ವಿಷಯವನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಅರ್ಜಿ ಶುಲ್ಕ ಎಷ್ಟು? : ಸಾಮಾನ್ಯ ವರ್ಗದ ಅಭ್ಯರ್ಥಿಗಳು ೬೦೦ ರೂ., ಒಬಿಸಿ ಅಭ್ಯರ್ಥಿಗಳು ೩೦೦ ರೂ. ಹಾಗೂ ಎಸ್‌ಸಿ/ಎಸ್ ಟಿ ಅಭ್ಯರ್ಥಿಗಳು ೧೫೦ ರೂ. ಪರೀಕ್ಷಾ ಶುಲ್ಕ ಪಾವತಿಸಬೇಕಾಗುತ್ತದೆ. ಇ-ಚಲನ್ ಮೂಲಕ ಅಥವಾ ಕ್ರೆಡಿಟ್/ ಡೆಬಿಟ್ ಕಾರ್ಡ್ ಮೂಲಕ ಶುಲ್ಕ ಪಾವತಿಸಲು ಅನುಮತಿಯಿದ್ದು, ಬೇರೆ ರೀತಿಯಲ್ಲಿ ಪಾವತಿಸಿದಲ್ಲಿ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ. ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಕೊನೆ ದಿನಾಂಕ 02-11-2015 ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿ ವೆಬ್ ಸೈಟ್ ಗಾಗಿ ಇಲ್ಲಿ click ಮಾಡಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

2 Comments

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.