ಬೆಳ್ಳಾರೆ ಡಾ. ಕೆ.ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಉನ್ನತ ಸ್ಪರ್ಧಾ ಪರೀಕ್ಷಾ ಮಾಹಿತಿ ಕಾರ್ಯಾಗಾರ ಜ.14ರಂದು ನಡೆಯಿತು.
ಪುತ್ತೂರು ವಿಭಾಗ ಸಹಾಯಕ ಆಯುಕ್ತರಾದ ಡಾ.ಕೆ.ವಿ.ರಾಜೇಂದ್ರ ಐಎಎಸ್ ಕಾರ್ಯಾಗಾರ ನಡೆಸಿ ಮಾತನಾಡಿದ ಅವರು, ನಾಗರಿಕ ಸೇವೆಗಳಾದ ಐ.ಎ.ಎಸ್., ಐ.ಪಿ.ಎಸ್., ಐ.ಎಫ್.ಎಸ್., ಐ.ಆರ್.ಎಸ್. ಪಾಸಾಗಬೇಕಾದರೆ ತುಂಬಾ ಪರಿಶ್ರಮ ಪಡಬೇಕಾಗುತ್ತದೆ. ದಿನನಿತ್ಯ ಹಲವು ಗಂಟೆಗಳ ಅಭ್ಯಾಸ ವೃತ್ತಪತ್ರಿಕೆಗಳ ಓದು ಮುಖ್ಯ. ಪ್ರತಿಯೊಬ್ಬರೂ ದೊಡ್ಡ ಕನಸುಗಳನ್ನು ಕಾಣಬೇಕು ಆಗ ನಮ್ಮ ಪ್ರಯತ್ನ ಫಲಿಸುತ್ತದೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಚಂದ್ರಶೇಖರ ಕಾಂತಮಂಗಲ ವಹಿಸಿದರು. ಮುಖ್ಯ ಅತಿಥಿಗಳಾಗಿ ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಶಕುಂತಲಾ ನಾಗರಾಜ್, ಪೆರುವಾಜೆ ಸ್ಪಂದನ ಕ್ರೀಡಾ ಮತ್ತು ಸಾಂಸ್ಕೃತಿಕ ಕಲಾ ಸಂಘದ ಅಧ್ಯಕ್ಷ ಸಚಿನ್ರಾಜ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಪ್ರಾಧ್ಯಾಪಕರಾದ ಡಾ.ನರೇಂದ್ರ ರೈ ಸ್ವಾಗತಿಸಿ, ಚಂದ್ರಶೇಖರ ಕಾಂತಮಂಗಲ ವಂದಿಸಿದರು.