HomePage_Banner
HomePage_Banner
HomePage_Banner
HomePage_Banner

ದಾವಣಗೆರೆಯ ಸೇನಾ ನೇಮಕಾತಿಗೆ ನೋಂದಣಿ ಆರಂಭ

ದಾವಣಗೆರೆಯಲ್ಲಿ ಜೂನ್ 4ರಂದು ಸೇನಾ ನೇಮಕಾತಿ ನಡೆಯಲಿದೆ. ನೇಮಕಾತಿಯಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಅಭ್ಯರ್ಥಿಗಳು ಮೇ 20ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ನೋಂದಣಿ ಮಾಡಿಕೊಳ್ಳಬೇಕು.

ದಾವಣಗೆರೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಜೂನ್ 4 ರಿಂದ 8ರ ತನಕ ಸೇನಾ ನೇಮಕಾತಿ ನಡೆಯಲಿದೆ. ಸೈನಿಕ, ಲಿಪಿಕ/ ಉಗ್ರಾಣ ಪಾಲಕ, ತಾಂತ್ರಿಕ, ನರ್ಸಿಂಗ್ ಅಸಿಸ್ಟೆಂಟ್, ಸೋಲ್ಜರ್ ಟೆಕ್ನಿಕಲ್ ಹಾಗೂ ಸೋಲ್ಜರ್ ಜೆಡಿ ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ.

ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಪುರುಷ ಅಭ್ಯರ್ಥಿಗಳು ನೇಮಕಾತಿಯಲ್ಲಿ ಪಾಲ್ಗೊಳ್ಳಬಹುದಾಗಿದೆ.

ನೇಮಕಾತಿಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.