ಸುಳ್ಯದಲ್ಲಿ ಕೃಷಿ ಯಂತ್ರಧಾರೆ ಬಾಡಿಗೆ ಆಧಾರಿತ ಸೇವಾ ಕೇಂದ್ರ ಉದ್ಘಾಟನೆ

Advt_Headding_Middle
Advt_Headding_Middle

ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆಗೆ ನೀಡುವ ಸುಳ್ಯ ಹೋಬಳಿ ಮಟ್ಟದ `ಕೃಷಿ ಯಂತ್ರಧಾರೆ’ ಸೇವಾ ಕೇಂದ್ರ ಸುಳ್ಯದ ಕೃಷಿ ಇಲಾಖೆಯ ಕಚೇರಿಯಲ್ಲಿ ನ.7ರಂದು ಆರಂಭಗೊಂಡಿದೆ.

krishi upakara kendra innogration.jpg 2 copy

ಶಾಸಕ ಎಸ್.ಅಂಗಾರ ನೂತನ ಸೇವಾ ಕೇಂದ್ರವನ್ನು ಉದ್ಘಾಟಿಸಿದರು. ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಆಶಾ ತಿಮ್ಮಪ್ಪ, ಸದಸ್ಯರಾದ ಎಸ್.ಎನ್.ಮನ್ಮಥ, ಹರೀಶ್ ಕಂಜಿಪಿಲಿ, ಪುಷ್ಪವತಿ ಬಾಳಿಲ, ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶುಭದಾ ಎಸ್ ರೈ, ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಸದಸ್ಯ ಅಶೋಕ್ ನೆಕ್ರಾಜೆ, ನಗರ ಪಂಚಾಯತ್ ಅಧ್ಯಕ್ಷೆ ಶೀಲಾವತಿ ಮಾಧವ, ಕೃಷಿಕ ಸಮಾಜದ ಅಧ್ಯಕ್ಷ ಅಡ್ಡಮತಡ್ಕ ದೇರಣ್ಣ ಗೌಡ, ಜಂಟಿ ಕೃಷಿ ನಿರ್ದೇಶಕ ಡಾ.ಎಚ್.ಕೆಂಪೇ ಗೌಡ, ಉಪ ಕೃಷಿ ನಿರ್ದೇಶಕ ಡಾ.ಡಿ.ಟಿ.ಮಂಜುನಾಥ, ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ಹರೀಶ್ ಶೆಣೈ ಅತಿಥಿಗಳಾಗಿದ್ದರು. ಪುತ್ತೂರಿನ ಸಾಯಾ ಎಂಟರ್‌ಪ್ರೈಸಸ್‌ನ ಗೋವಿಂದ ಪ್ರಕಾಶ, ಸಹಾಯಕ ಕೃಷಿ ನಿರ್ದೇಶಕ ಕೆ.ಜಿ.ಪಾಲಿಚಂದ್ರ, ಕೃಷಿ ಅಧಿಕಾರಿ ಮೋಹನ್ ನಂಗಾರು ಉಪಸ್ಥಿತರಿದ್ದರು. ಜಿಲ್ಲೆಯಲ್ಲಿ ಈ ವರ್ಷ 75-25ರ ಖಾಸಗಿ ಸಹಭಾಗಿತ್ವದಲ್ಲಿ ೫ ಕೃಷಿ ಯಂತ್ರಧಾರೆ ಕೇಂದ್ರಗಳು ಆರಂಭಗೊಳ್ಳಲಿವೆ. 40 ಲಕ್ಷ ವೆಚ್ಚದಲ್ಲಿ ವಿವಿಧ ಯಂತ್ರಗಳನ್ನು ಪ್ರತಿ ಕೇಂದ್ರಕ್ಕೂ ಒದಗಿಸಲಾಗಿದೆ. ಕನಿಷ್ಠ ದರದಲ್ಲಿ ಸೇವೆ ಒದಗಿಸಲಾಗುತ್ತದೆ ಎಂದು ಡಾ| ಡಿ.ಟಿ.ಮಂಜುನಾಥ ತಿಳಿಸಿದರು.

krishi upakara kendra innogration copy

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.