ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಸಭೆ

Advt_Headding_Middle
Advt_Headding_Middle

subramanya meeting copyಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಾತ್ರೆ ಪ್ರಯುಕ್ತ ಆಡಳಿತ ಮಂಡಳಿ, ಊರವರ, ಸಂಘಸಂಸ್ಥೆಗಳ ವಿಶೇಷ ಸಭೆಯನ್ನು ಇಂದು ನಡೆಸಲಾಯಿತು. ಅಧ್ಯಕ್ಷತೆಯನ್ನು ನಿತ್ಯಾನಂದ ಮುಂಡೋಡಿ ವಹಿಸಿದ್ದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಕೇನ್ಯ ರವೀಂದ್ರನಾಥ ರೈ, ಮಹೇಶ್‌ಕುಮಾರ್ ಕರಿಕ್ಕಳ, ಬಾಲಕೃಷ್ಣ ಬಳ್ಳೇರಿ, ಕೃಷ್ಣಮೂರ್ತಿ ಭಟ್, ದಮಯಂತಿ ಕೂಜುಗೋಡು, ರಾಜೀವಿ ಆರ್ ರೈ, ಮಾಧವ ದೇವರಗದ್ದೆ, ಧಾರ್ಮಿಕ ಪರಿಷತ್ ಸದಸ್ಯೆ ವಿಮಲ ರಂಗಯ್ಯ, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯ ಶಿವರಾಮ ರೈ, ತಾ.ಪಂ. ಸದಸ್ಯ ಅಶೋಕ್ ನೆಕ್ರಾಜೆ, ಪೋಲೀಸ್ ವೃತ್ತ ನಿರೀಕ್ಷಕ ಕೃಷ್ಣಯ್ಯ, ಸುಬ್ರಹ್ಮಣ್ಯ ಠಾಣಾಧಿಕಾರಿ, ಸಿಬ್ಬಂದಿ ದೇವರಾಜ್, ಉದ್ಯಮಿ ದಿನೇಶ್ ಬಿ.ಎನ್, ಗ್ರಾ.ಪಂ. ಅಧ್ಯಕ್ಷೆ ಸುಶೀಲಾ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಡಾ. ಸುಬ್ರಹಣ್ಯ, ಮೆಸ್ಕಾಂ ಇಂಜಿನಿಯರ್, ದೇವಾಲಯ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು. ಜಾತ್ರಾ ಸಂದರ್ಭದಲ್ಲಿ ನಡೆಯಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ, ಇನ್ನಿತರ ವಿಷಯಗಳನ್ನು ಚರ್ಚಿಸಲಾಯಿತು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ ಸ್ವಾಗತಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.